ಮಣಿಪಾಲ: ರಾಜ್ಯ ವಿಶೇಷ ಶಿಕ್ಷಕ- ಶಿಕ್ಷಕೇತರರ ಸಂಘ ಉಡುಪಿ ಜಿಲ್ಲಾ ಘಟಕದ ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ವಿಶೇಷ ಶಿಕ್ಷಕ- ಶಿಕ್ಷಕೇತರರ ಗೌರವಧನ ದ್ವಿಗುಣಗೊಳಿಸಬೇಕೆಂಬ ಬೇಡಿಕೆಯೊಂದಿಗೆ ಒಂದು ದಿನದ ಸಾಂಕೇತಿಕ ಮುಷ್ಕರ ನಡೆಯಿತು.
ರಾಜ್ಯದ ಬೆನ್ನೆಲುಬಾಗಿರುವ ರೈತರ ಸೇವೆ ಸ್ಮರಿಸುತ್ತ ರೈತ ಗೀತೆ ಹಾಡುವ ಮೂಲಕ ಮುಷ್ಕರ ಪ್ರಾರಂಭಿಸಿ ರಾಷ್ಟ್ರ ನಾಯಕರ ಭಾವಚಿತ್ರದ ಎದುರು ದೀಪ ಪ್ರಜ್ವಲಿಸಿ ಜಯಕರ್ ಶೆಟ್ಟಿ ಇಂದ್ರಾಳಿ ಮುಷ್ಕರಕ್ಕೆ ಚಾಲನೆ ನೀಡಿದರು.
ಈ ಸಂದರ್ಭ ಜಿಲ್ಲಾಧಿಕಾರಿ ಜಿ. ಜಗದೀಶ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ವಿಶೇಷಚೇತನರ ಸಬಲೀಕರಣ ಅಧಿಕಾರಿ ರತ್ನಾ ಮುಷ್ಕರ ನಡೆಯುವ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದರು. ಅಧಿಕಾರಿಗಳ ಮೂಲಕ ನಿರ್ದೇಶಕರಿಗೆ, ಸಚಿವರಿಗೆ, ಮುಖ್ಯಮಂತ್ರಿಗೆ ಬೇಡಿಕೆಯ ಮನವಿ ನೀಡಲಾಯಿತು.
ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷೆ ಡಾ. ಕಾಂತಿ ಹರೀಶ್, ಗೌರವಾಧ್ಯಕ್ಷೆ ಆಗ್ನೇಸ್ ಕುಂದರ್, ಉಪಾಧ್ಯಕ್ಷೆ ಪ್ರೇಮ, ಕಾರ್ಯದರ್ಶಿ ಜಯವಿಜಯ, ಕೋಶಾಧಿಕಾರಿ ಪ್ರಮೀಳಾ, ಹಾಗೂ ಸಂಘದ ಪದಾಧಿಕಾರಿಗಳು, ಸಂಸ್ಥೆ ಮುಖ್ಯಸ್ಥರು, ವಿಶೇಷ ಶಿಕ್ಷಕ- ಶಿಕ್ಷಕೇತರರು ಉಪಸ್ಥಿತರಿದ್ದರು.
Kshetra Samachara
02/12/2020 05:32 pm