ಮಂಗಳೂರು: ಕೇರಳ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮುಂದೂಡಲಾಗಿದ್ದ ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳನ್ನು ಆಗಸ್ಟ್ 11ರಿಂದ ನಡೆಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರ್ಧರಿಸಿದೆ.
ಹೊರ ರಾಜ್ಯದ ವಿದ್ಯಾರ್ಥಿಗಳು ಸೇರಿದಂತೆ ಯಾವುದೇ ವಿದ್ಯಾರ್ಥಿಗಳು ವಾಹನ ಸೌಲಭ್ಯ ಅಥವಾ ಕೋವಿಡ್ ಸಮಸ್ಯೆಯಿಂದ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದೇ ಇದ್ದರೆ ಅಂತಹ ವಿದ್ಯಾರ್ಥಿಗಳಿಗೆ ವಿಶೇಷ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 29,052 ಪದವಿ ಮತ್ತು 5,493 ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ ಕೇರಳದ 2 ಸಾವಿರ ವಿದ್ಯಾರ್ಥಿಗಳು ಪದವಿ ಪರೀಕ್ಷೆಗೆ ಹಾಜರಾಗಲಿದ್ದಾರೆ. ಈ ಪರೀಕ್ಷೆ ಎದುರಿಸಲಿರುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.
Kshetra Samachara
06/08/2021 09:48 am