ಮಂಗಳೂರು: ಕೊರೊನಾದಿಂದಾಗಿ ಶಾಲಾಕಾಲೇಜುಗಳನ್ನು ಬಂದ್ ಮಾಡಲಾಗಿತ್ತು ಸದ್ಯ ಒಂದೊಂದೆ ತರಗತಿಗಳನ್ನು ಆರಂಭಿಸಲಾಗುತ್ತಿದೆ. ಸದ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ನಿಯಮ ಪಾಲಿಸುತ್ತಲೇ ಸೆ.1ರಿಂದ ದ್ವಿತೀಯ ಪಿಯುಸಿ ಭೌತಿಕ ತರಗತಿ ಆರಂಭಿಸಲು ಜಿಲ್ಲಾಡಳಿತ ಸಮ್ಮತಿ ನೀಡಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅದೇಶಿಸಿದ್ದಾರೆ.
ಎಸ್.ಒ.ಪಿ ಅನುಷ್ಠಾನ ಜಾರಿಗೊಳಿಸುವ ಜವಾಬ್ದಾರಿಯನ್ನು ಕಾಲೇಜಿನ ಪ್ರಾಂಶುಪಾಲರು ವಹಿಸುವಂತೆ ಸೂಚನೆ ನೀಡಲಾಗಿದ್ದು, ಕೇರಳದಿಂದ ಬರುವ ವಿದ್ಯಾರ್ಥಿಗಳಿಗೆ ಏಳು ದಿನ ಕ್ವಾರಂಟೈನ್ ಕಡ್ಡಾಯ ಮಾಡಲು ಆದೇಶಿಸಿದೆ. ಕೇರಳದಿಂದ ಪ್ರತಿದಿನ ಬರುವ ವಿದ್ಯಾರ್ಥಿಗಳಿಗೆ 7 ದಿನಕ್ಕೊಮ್ಮೆ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯವಾಗಿದ್ದು, ವಿದ್ಯಾರ್ಥಿಗಳಿಗೆ ಪೋಷಕರ ಒಪ್ಪಿಗೆ ಪತ್ರ ಕಡ್ಡಾಯ.
ವಸತಿ ನಿಲಯ ಹಾಗೂ ಸ್ಥಳೀಯ ವಿದ್ಯಾರ್ಥಿಗಳಿಗೆ ಪ್ರತ್ಯೇಕ ತರಗತಿ ನಡೆಸಬೇಕು. ಪಾಸಿಟಿವ್ ಬಂದ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲೇ ವಸತಿ ಸಹಿತ ಪ್ರತ್ಯೇಕ ಕೊರೊನಾ ಕೇರ್ ಸೆಂಟರ್ ಮಾಡಬೇಕು. ಸಿಬ್ಬಂದಿಗಳಿಗೆ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯಗೊಳಿಸಬೇಕು. ಜೊತೆಗೆ ಕೊರೊನಾ ಎಸ್.ಒ.ಪಿ ಪಾಲನೆಯ ಪರಿಶೀಲನೆಗೆ ಪ್ರತ್ಯೇಕ ತಂಡ ರಚನೆ ಮಾಡಬೇಕೆಂದು ಆದೇಶಿಸಲಾಗಿದೆ.
Kshetra Samachara
29/08/2021 07:26 pm