ಕಡಬ: ತಾಲೂಕಿನ ಗ್ರಾಮೀಣ ಪ್ರದೇಶ ಕುಂತೂರು ಸಮೀಪದ ಕೋಚಕಟ್ಟೆ ನಿವಾಸಿ ಎ.ಕೆ. ಇಸ್ಮಾಯಿಲ್ ಹಾಗೂ ಝುಬೈದಾ ಹೆಂತಾರು ದಂಪತಿಯ ನಾಲ್ವರು ಪುತ್ರಿಯರ ಪೈಕಿ ಕೊನೆಯವಳಾದ ಬದ್ರುನಿಶಾ ಇದೀಗ ಪಿಎಸ್ಐ ಆಗಿ ಆಯ್ಕೆಯಾಗಿದ್ದು, ಗ್ರಾಮೀಣ ಭಾಗದಲ್ಲಿ ಕಲಿತು ಪಿಎಸ್ಐ ಪರೀಕ್ಷೆಯಲ್ಲಿ ಉನ್ನತ ಫಲಿತಾಂಶ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ತನ್ನ ಪ್ರಾಥಮಿಕ ಶಿಕ್ಷಣವನ್ನು ಕುಂತೂರಿನ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತ್ತು ಪ್ರೌಢಶಾಲಾ ಶಿಕ್ಷಣವನ್ನು ಸಂತ ಜಾರ್ಜ್ ಪ್ರೌಢಶಾಲೆ ಕುಂತೂರು ಪದವು ಹಾಗೂ ಪಿಯುಸಿ ಶಿಕ್ಷಣವನ್ನು ರಾಮಕುಂಜದ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಮತ್ತು ಯುನಿವರ್ಸಿಟಿ ಆಫ್ ಅಗ್ರಿಕಲ್ಚರ್ ಸೈನ್ಸಸ್ ಆಫ್ ಗಾಂಧಿ ಕೃಷಿ ವಿಜ್ಞಾನ ಕೇಂದ್ರ ಬೆಂಗಳೂರಿನಲ್ಲಿ ಬಿಎಸ್ಸಿ ಕೃಷಿ ಪದವಿಯನ್ನೂ ಪಡೆದಿರುತ್ತಾರೆ.
Kshetra Samachara
22/01/2022 11:45 am