ಉಡುಪಿ: ರಾಜ್ಯದ ಪದವಿ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ವಸ್ತ್ರಸಂಹಿತೆಗೆ ಸಂಬಂಧಿಸಿದಂತೆ ಹೈಕೋರ್ಟ್ ಪೂರ್ಣಪೀಠ ನೀಡಿರುವ ಮಧ್ಯಂತರ ಆದೇಶವನ್ನು ಪಾಲನೆ ಮಾಡುವ ಕುರಿತಂತೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ವಿಡಿಯೋ ಕಂಫರೆನ್ಸ್ ಮುಖಾಂತರ ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪೊಲೀಸ್ ಅಧೀಕ್ಷಕರು ಹಾಗೂ ಪೊಲೀಸ್ ಕಮಿಷನರ್ ರವರಿಗೆ ಮುಖ್ಯಮಂತ್ರಿಗಳು ಅಗತ್ಯ ಸೂಚನೆಗಳನ್ನು ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ವಸ್ತ್ರಸಂಹಿತೆ ಕುರಿತು ಉಚ್ಚ ನ್ಯಾಯಾಲಯದ ಪೂರ್ಣಪೀಠ ನೀಡಿರುವ ಆದೇಶವನ್ನು ಪಾಲನೆ ಮಾಡುವಂತೆ ಉಡುಪಿ ಜಿಲ್ಲೆಯ ಎಲ್ಲ ಪದವಿಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ, ಇಂದು ಫೆ. 12 ರ ಶನಿವಾರದಂದು ಶಿಕ್ಷಕರ ಮತ್ತು ಪೋಷಕರ ಸಭೆ, ಕಾಲೇಜು ಅಭಿವೃದ್ಧಿ ಸಮಿತಿ ಸಭೆ ಹಾಗು ಕಾಲೇಜು ಆಡಳಿತ ಮಂಡಳಿ ಸಭೆ ಗಳನ್ನು ಕರೆದು,ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕಾಲೇಜುಗಳ ಪ್ರಾಂಶುಪಾಲರಿಗೆ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹಾಗೂ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸೂಚನೆ ನೀಡಿದ್ದಾರೆ.
Kshetra Samachara
12/02/2022 11:54 am