ದೇರೆಬೈಲ್: ಮಂಗಳೂರಿನ ದೇರೆಬೈಲ್ ಕೊಂಚಾಡಿಯ ನಿವಾಸಿ ವಿದ್ಯಾರ್ಥಿನಿ ಅನೈನಾ ಅನ್ನ ಅವರು ಉಕ್ರೇನ್‌ನ ಕಾರ್ಕಿವ್ ನಗರದಲ್ಲಿ ಸಿಲುಕಿದ್ದು, ಅವರ ಪೋಷಕರು ಆತಂಕಕ್ಕೆ ಒಳಗಾಗಿದ್ದ ಹಿನ್ನೆಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಮಂಗಳೂರು ನಗರ ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಅನೈನಾ ಅನ್ನ ಅವರ ಮನೆಗೆ ತೆರಳಿ ಪೋಷಕರನ್ನು ಭೇಟಿಯಾಗಿ ಧೈರ್ಯ ತುಂಬಿದರು.
ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ಮನಪಾ ಸದಸ್ಯರಾದ ರಂಜಿನಿ ಕೋಟ್ಯಾನ್, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
02/03/2022 06:30 pm