ಉಡುಪಿ: ಜಿಲ್ಲೆಯ ಕಾಲೇಜು ಸುತ್ತಮುತ್ತ ನಿಷೇಧಾಜ್ಞೆ ವಿಸ್ತರಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್- ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ಸಲುವಾಗಿ ಮಾ.7ರ ಬೆಳಗ್ಗೆ 6 ಗಂಟೆಯಿಂದ ಮಾ.12ರ ಸಂಜೆ 6 ಗಂಟೆಯವರೆಗೆ ಜಿಲ್ಲೆಯ ಎಲ್ಲಾ ಪದವಿ ಪೂರ್ವ, ಪಾಲಿಟೆಕ್ನಿಕ್ ಮತ್ತು ಪದವಿ ಕಾಲೇಜುಗಳ ಸುತ್ತಮುತ್ತಲು 200 ಮೀ. ಪ್ರದೇಶದಲ್ಲಿ ದಂಡ ಪ್ರಕ್ರಿಯೆ ಸಂಹಿತೆ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಡಿಸಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.
Kshetra Samachara
04/03/2022 09:36 pm