ಮಂಗಳೂರು: ಹಿಜಾಬ್ ವಿವಾದ ಭುಗಿಲೆದ್ದ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿಗೆ ಇಂದು 12 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ಆಗಮಿಸಿದ್ದು, ಪ್ರಾಂಶುಪಾಲರು ಅವರನ್ನು ತರಗತಿಗೆ ಪ್ರವೇಶ ನಿರಾಕರಿಸಿದ್ದಾರೆ.
ಮಂಗಳೂರು ವಿವಿ ಕಾಲೇಜಿನಲ್ಲಿ ನಿನ್ನೆ ನಡೆದ ಸಮಿಯ ನಿರ್ಧಾರದಂತೆ ತರಗತಿ ಹಾಗೂ ಲೈಬ್ರೆರಿಗೆ ಹಿಜಾಬ್ ಸಹಿತ ಪ್ರವೇಶವನ್ನು ಖಡಾಖಂಡಿತವಾಗಿ ನಿಷೇಧಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ತರಗತಿಗೆ ಬಾರದಂತೆ ಪ್ರಾಂಶುಪಾಲೆ ಡಾ.ಅನಸೂಯಾ ರೈ ಪ್ರವೇಶ ನಿರಾಕರಿಸಿದ್ದರು. ಆದ್ದರಿಂದ ಅವರು ಲೈಬ್ರರಿಯತ್ತ ತೆರಳಿದರೆ ಅಲ್ಲಿಯೂ ಅವರಿಗೆ ಪ್ರವೇಶ ನಿರಾಕರಿಸಲಾಯಿತು. ಈ ಹಿನ್ನೆಲೆಯಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು ಮನೆಯತ್ತ ತೆರಳಿದರು.
PublicNext
28/05/2022 12:36 pm