ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ - ಕಾಲೇಜುಗಳಿಗೆ ನಾಳೆಯೂ ರಜೆ ಘೋಷಣೆ

ಮಂಗಳೂರು: ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯಾದ್ಯಂತ ನಾಳೆಯೂ ಎಲ್ಲಾ ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಸೋಮವಾರ ಹಾಗೂ ಮಂಗಳವಾರ ಮುನ್ನೆಚ್ಚರಿಕಾ ದೃಷ್ಟಿಯಿಂದ ಶಾಲೆಗೆ ರಜೆ ನೀಡಲಾಗಿತ್ತು. ಆದರೆ ಹವಾಮಾನ ಇಲಾಖೆ ನಾಳೆ ರೆಡ್ ಅಲರ್ಟ್ ಘೋಷಿಸಿದೆ‌.

ಈ ಹಿನ್ನೆಲೆಯಲ್ಲಿ ಅತಿಯಾದ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ‌ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು, ಪದವಿ ಪೂರ್ವ, ಪದವಿ ಕಾಲೇಜು, ಐಟಿಐ/ಡಿಪ್ಲೊಮಾಗಳಿಗೆ ರಜೆ ಘೋಷಣೆ ಮಾಡಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Edited By :
Kshetra Samachara

Kshetra Samachara

06/07/2022 08:28 pm

Cinque Terre

9.24 K

Cinque Terre

0

ಸಂಬಂಧಿತ ಸುದ್ದಿ