ಉಡುಪಿ: ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ನಾಳೆ (ಜು.11) ಜಿಲ್ಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಆದರೆ ಪಿಯುಸಿ, ಪದವಿ ಮತ್ತು ಇತರೆ ಕಾಲೇಜುಗಳಿಗೆ ಎಂದಿನಂತೆ ತರಗತಿಗಳಿವೆ ಎಂದು ಉಡುಪಿ ಜಿಲ್ಲಾಡಳಿತ ಮಾಹಿತಿ ನೀಡಿದೆ.
Kshetra Samachara
10/07/2022 08:11 pm