ಮಂಗಳೂರು: ಹವಾಮಾನ ಇಲಾಖೆಯು ದ.ಕ.ಜಿಲ್ಲೆಯಲ್ಲಿ ಜು.12 ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ನಾಳೆ ಶಾಲೆಗೆ ರಜೆ ಇರೋದಿಲ್ಲ. ಆದ್ದರಿಂದ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಎಂದಿನಂತೆ ತರಗತಿಗಳು ನಡೆಯಲಿವೆ.
ಮಳೆಯ ಬಿರುಸು ಪಡೆದಿದ್ದ ಹಿನ್ನೆಲೆಯಲ್ಲಿ ಎಲ್ಲಾ ಶಾಲೆಗಳಿಗೆ ಜು.5ರಿಂದ ರಜೆ ನೀಡಲಾಗಿತ್ತು. ಇಂದು ಮಳೆ ಕೊಂಚ ಬಿಡುವು ಪಡೆದಿದ್ದು, ಹವಾಮಾನ ಇಲಾಖೆ ನಾಳೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಆದರೆ ಯಾವುದಾದರೂ ತೊಂದರೆಗಳಿದ್ದಲ್ಲಿ ಸ್ಥಳೀಯ ಶಾಲೆಗಳಲ್ಲಿ ನಿರ್ಧಾರ ಕೈಗೊಳ್ಳಲು ಡಿಡಿಪಿಐ, ದ.ಕ.ಜಿಪಂ ಸಿಇಒ, ದ.ಕ.ಜಿಲ್ಲಾಧಿಕಾರಿಯವರ ಅನುಮತಿ ಪಡೆದು ಸ್ಥಳೀಯವಾಗಿ ರಜೆ ಘೋಷಿಸಲು ಅವಕಾಶ ನೀಡಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.
Kshetra Samachara
11/07/2022 07:26 pm