ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರಕೃತಿ ಮಡಿಲಲ್ಲಿ ಕಲಿಯುವುದೇ ನಿಜವಾದ ಶಿಕ್ಷಣ:ಡಿಡಿಪಿಐ ಸುಧಾಕರ್

ಸುಳ್ಯ: ಪ್ರಕೃತಿಯ ಮಡಿಲಲ್ಲಿ ಕಲಿಯುವ ಕಲಿಕೆಯೇ ನಿಜವಾದ ಶಿಕ್ಷಣ. ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಜೀವನ ಪಾಠವಿದೆ, ಅದ್ಭುತ ಕಲಿಕೆಯಿದೆ.ಇಲ್ಲಿನ ಪ್ರತಿಯೊಬ್ಬ ವಿದ್ಯಾರ್ಥಿಗಳು ಸಂಸ್ಥೆಯ ರಾಯಭಾರಿಗಳಾಗಿ ಈ ಸಂಸ್ಥೆಯ ಬೆಳವಣಿಗೆಗೆ ಮುನ್ನುಡಿ ಬರೆಯಬೇಕು ಎಂದು ದ.ಕ.ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸುಧಾಕರ ಅವರು ಹೇಳಿದರು.

ಅವರು ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ವಿಜ್ಞಾನ ಸಂಪನ್ಮೂಲ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ಇಲ್ಲಿರುವ ಸುಂದರ ಪರಿಸರ, ವಿಜ್ಞಾನ ಕೇಂದ್ರದ ಸೌಲಭ್ಯವನ್ನು ಪಡೆದು ವಿದ್ಯಾರ್ಥಿಗಳು ಬೆಳೆಯಬೇಕು ಎಂದು ಅವರು ಕರೆ ನೀಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ ಮಾತನಾಡಿ “ಶಿಕ್ಷಣದ ಪ್ರಯೋಗದ ಸಫಲತೆಗೆ ಮಕ್ಕಳೇ ಸಾಕ್ಷಿ. ಹಿರಿಯ ವಿದ್ಯಾರ್ಥಿಗಳು ಮಾಡಿದ ಸಾಧನೆಯು ನಮ್ಮ ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿ. ಮಕ್ಕಳ ಸಾಮರ್ಥ್ಯ ಬೆಳೆಸಲು ನಾವು ಅವಕಾಶಗಳನ್ನು ಒದಗಿಸಿದಾಗ ವಿದ್ಯಾರ್ಥಿಗಳು ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಸ್ನೇಹ ಶಿಕ್ಷಣ ಸಂಸ್ಥೆಯ ನಿರ್ದೇಶಕ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್,ಶಾಲಾ ಸಂಚಾಲಕ ಡಾ.ವಿದ್ಯಾಶಾಂಭವ ಪಾರೆ ಉಪಸಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯನಿ ಜಯಲಕ್ಷ್ಮಿ ದಾಮ್ಲೆ ಸ್ವಾಗತಿಸಿ, ವಿಜ್ಞಾನ ಶಿಕ್ಷಕಿ ಅಮೃತ ಕೆ ಧನ್ಯವಾದವಿತ್ತರು. ಪ್ರತಿಮಾಕುಮಾರಿ ಕೆ. ಎಸ್ ನಿರೂಪಿಸಿದರು. ಈ ಸಂದರ್ಭದಲ್ಲಿ ಶಿಕ್ಷಕ ವೃಂದ, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

10/08/2022 10:18 pm

Cinque Terre

3.87 K

Cinque Terre

0

ಸಂಬಂಧಿತ ಸುದ್ದಿ