ಮಂಗಳೂರು: ಹಿಜಾಬ್ ವಿಚಾರದಲ್ಲಿ ಭಾರೀ ವಿವಾದ ಭುಗಿಲೆದ್ದ ಮಂಗಳೂರು ವಿವಿಯ ಅಧೀನದಲ್ಲಿರುವ ಹಂಪನಕಟ್ಟೆಯ ಮಂಗಳೂರು ವಿವಿ ಕಾಲೇಜಿನಲ್ಲಿ ಈ ಬಾರಿ 10 ಮುಸ್ಲಿಂ ವಿದ್ಯಾರ್ಥಿನಿಯರು ಸೇರ್ಪಡೆಗೊಂಡಿದ್ದಾರೆ. ಹಿಜಾಬ್ ವಿವಾದ ಈ ಬಾರಿಯ ಅಡ್ಮಿಷನ್ ನಲ್ಲಿ ಪರಿಣಾಮ ಬೀರಿರುವುದು ಕಂಡು ಬಂದಿದ್ದರೂ, 10 ಮುಸ್ಲಿಂ ವಿದ್ಯಾರ್ಥಿನಿಯರ ಸೇರ್ಪಡೆ ಕೊಂಚ ಸಮಾಧಾನ ತಂದಿದೆ.
ಕಳೆದ ವರ್ಷ ಮಂಗಳೂರು ವಿವಿ ಕಾಲೇಜಿನಲ್ಲಿ ಒಟ್ಟು 44 ಮುಸ್ಲಿಂ ವಿದ್ಯಾರ್ಥಿನಿಯರಿದ್ದರು. ಆದರೆ ಆ ಬಳಿಕ ಕ್ಯಾಂಪಸ್‌ನಲ್ಲಿ ಹಿಜಾಬ್ ವಿವಾದ ಭುಗಿಲೆದ್ದ ಬಳಿಕ, 7 ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜು ತೊರೆದಿದ್ದರು. ಈ ಬಾರಿ 10 ಮಂದಿ ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿಗೆ ಸೇರ್ಪಡೆಯಾಗಿದ್ದಾರೆ.
ಹಿಜಾಬ್ ವಿಚಾರವಾಗಿ ಕ್ಯಾಂಪಸ್‌ನಲ್ಲಿ ಸದ್ಯ ಯಾವುದೇ ಸಮಸ್ಯೆಗಳಿಲ್ಲ. ಎಲ್ಲವೂ ಸಹಜ ಸ್ಥಿತಿಗೆ ಮರಳುತ್ತಿದೆ. ಹಿಜಾಬ್ ವಿವಾದದ ಬಳಿಕ ಕಾಲೇಜು ತೊರೆದಿರುವ ಏಳು ಮಂದಿ ವಿದ್ಯಾರ್ಥಿನಿಯರಲ್ಲಿ ಮೂವರು ಕೊಡಿಯಾಲ್ ಬೈಲ್ ನ ಖಾಸಗಿ ಕಾಲೇಜಿಗೆ ಸೇರುವ ಪ್ರಯತ್ನದಲ್ಲಿದ್ದಾರೆ. ಇಬ್ಬರು ವಿದ್ಯಾರ್ಥಿನಿಯರು ತಮ್ಮ ಆದ್ಯತೆಯ ವಿಷಯ ಸಂಯೋಜನೆಯನ್ನು ದೊರಕದ ಹಿನ್ನೆಲೆಯಲ್ಲಿ ಶಿಕ್ಷಣ ಮೊಟಕುಗೊಳಿಸಿದ್ದಾರೆ. ಒಬ್ಬರು ಇಂಜಿನಿಯರಿಂಗ್ ಕೋರ್ಸ್‌ಗೆ ಸೇರಿದ್ದಾರೆ ಎಂದು ತಿಳಿದುಬಂದಿದೆ.
Kshetra Samachara
18/08/2022 07:08 pm