ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಂದೂರು: ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿಗೆ ಬೈಂದೂರು ವಲಯದ ಐವರು ಆಯ್ಕೆ

ಬೈಂದೂರು: 2022-23ನೇ ಸಾಲಿನ ಶಿಕ್ಷಕರ ದಿನದ ಅಂಗವಾಗಿ ನೀಡಲಾಗುವ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಬೈಂದೂರು ತಾಲೂಕಿನ ಐವರು ಶಿಕ್ಷಕರು ಆಯ್ಕೆಯಾಗಿದ್ದಾರೆ.

ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಆಲಂದೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಸಹಶಿಕ್ಷಕ ಮಾಧವ ಬಿಲ್ಲವ, ಅಜಿಗದ್ದೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ದಿನೇಶ್, ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಹೊಸೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಲಲಿತ ಚಂದ್ರ ಪಟಗಾ‌ ಹಾಗೂ ಪ್ರೌಢಶಾಲಾ

ವಿಭಾಗದಲ್ಲಿ ಬೈಂದೂರು ಜ್ಯೂನಿಯರ್ ಕಾಲೇಜಿನ ಹಿಂದಿ ಭಾಷಾ ಶಿಕ್ಷಕ ರವೀಂದ್ರ ಪಿ., ಕೊಲ್ಲೂರು ಮೂಕಾಂಬಿಕಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಹಶಿಕ್ಷಕ ಸಚಿನ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಸೆ. 5ರಂದು ಮಣಿಪಾಲ ರಜತಾದ್ರಿ ವಾಜಪೇಯಿ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

Edited By : Abhishek Kamoji
Kshetra Samachara

Kshetra Samachara

05/09/2022 02:58 pm

Cinque Terre

3.05 K

Cinque Terre

0

ಸಂಬಂಧಿತ ಸುದ್ದಿ