ಉಡುಪಿ: ಪ್ರಸಕ್ತ ಸಾಲಿನ ರಾಜ್ಯದ ಸರಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್‌ಗಳಲ್ಲಿ ಅನ್‌ಲೈನ್ ನಾನ್-ಇಂಟರಾಕ್ಟೀವ್ ಕೌನ್ಸಲಿಂಗ್ ಮೂಲಕ ಎರಡು ವರ್ಷಗಳ ಐ.ಟಿ.ಐ ಮತ್ತು ದ್ವಿತೀಯ ಪಿಯುಸಿ ವಿಜ್ಞಾನ / ತಾಂತ್ರಿಕ ವಿಷಯಗಳಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರೀ ಸ್ಕೀಂ ರಡಿಯಲ್ಲಿ 2 ನೇ ವರ್ಷ / 3ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್ಗಳಿಗೆ ಪ್ರವೇಶ ಬಯಸುವ ಅರ್ಹಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟಂಬರ್ 28 ರಿಂದ ಅಕ್ಟೋಬರ್ 6 ರ ವರೆಗೆ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ಪ್ರವೇಶ ಪ್ರಕ್ರಿಯೆಯ ಅಧಿಸೂಚನೆಯ ವಿವರಗಳನ್ನು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಬೆಂಗಳೂರು ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್ dtek.karnataka.gov.in ಅಥವಾ dtetech.karnataka.gov.in/kartechnical ನಿಂದ ಮಾಹಿತಿಯನ್ನು ಡೌನ್‌ಲೋಡ್ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು ಅಥವಾ ಸಮೀಪದ ಸರ್ಕಾರಿ/ ಅನುದಾನಿತ ಪಾಲಿಟೆಕ್ನಿಕ್‌ಗಳಿಗೆ ಭೇಟಿ ನೀಡಿ ಸರ್ಜಿ ಸಲ್ಲಿಸಲು ಹಾಗೂ ಆಪ್ಷನ್ ಎನ್ಟಿç ಯನ್ನು ಆನ್‌ಲೈನ್‌ನಲ್ಲಿ ದಾಖಲಿಸಬಹುದು.
ಪ್ರಸಕ್ತ ಸಾಲಿನ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಪ್ರವೇಶ ಬಯಸುವ ಅಭ್ಯರ್ಥಿಗಳಿಗೆ ಸರಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್‌ಗಳ ಕೋರ್ಸ್ಗಳಲ್ಲಿ ಭರ್ತಿಯಾಗದೇ ಉಳಿದಿರುವ ಸೀಟುಗಳಿಗೆ ಆಫ್‌ಲೈನ್ ಮುಖಾಂತರ ಅರ್ಜಿ ಪಡೆಯಲು ಹಾಗೂ ಸ್ವೀಕರಿಸುವ ಅವಧಿಯನ್ನು ಸೆಪ್ಟಂಬರ್ 30 ರ ವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಪಾಲಿಟೆಕ್ನಿಕ್ ಉಡುಪಿ ಸಂಸ್ಥೆಯ ಪ್ರಾಚಾರ್ಯರ ದೂರವಾಣಿ ಸಂಖ್ಯೆ: 0820-2570244 ನ್ನು ಸಂಪರ್ಕಿಸುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.
Kshetra Samachara
25/09/2020 08:31 pm