ಉಡುಪಿ: ಉಡುಪಿಯ ಸರಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಹಿಜಾಬ್ ವಿವಾದ ಮತ್ತೊಂದು ಹಂತಕ್ಕೆ ತಲುಪಿದೆ. ವಿದ್ಯಾರ್ಥಿನಿಯರ ಭವಿಷ್ಯದ ದೃಷ್ಟಿಯಿಂದ ಆನ್ ಲೈನ್ ಕ್ಲಾಸ್ ನಡೆಸಿ, ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲು ಅಭಿವೃದ್ಧಿ ಮಂಡಳಿ ಅವಕಾಶ ಕಲ್ಪಿಸಿದೆ.
ಆದರೆ, ಕಾಲೇಜು ಅಭಿವೃದ್ಧಿ ಮಂಡಳಿ ಯಾವುದೇ ಕಾರಣಕ್ಕೂ ಪಾಠ ಮಾಡುವಾಗ ಹಿಜಾಬ್ ಧರಿಸುವುದಕ್ಕೆ ಅವಕಾಶ ಇಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದೆ. ಹೀಗಾಗಿ ವಿವಾದ ಮತ್ತಷ್ಟು ಜಟಿಲವಾಗುತ್ತಿದೆ. ಇದೇ ವಿಚಾರವಾಗಿ ಮುಸ್ಲಿಂ ಮುಖಂಡ ಜಿ.ಎ. ಬಾವ ಅವರ ಜೊತೆ ಸಭೆ ನಡೆಸಿದ ಶಾಲಾ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಸ್ಥಳೀಯ ಶಾಸಕ ರಘುಪತಿ ಭಟ್ , ಹಿಜಾಬ್ ಬೇಕೆನ್ನುವ ಆರು ಮಂದಿ ವಿದ್ಯಾರ್ಥಿನಿಯರಿಗೆ ಆನ್ ಲೈನ್ ಕ್ಲಾಸ್ ನಡೆಸುವ ತೀರ್ಮಾನ ಕೈಗೊಂಡಿದ್ದಾರೆ. ವಿದ್ಯಾರ್ಥಿನಿಯರ ಭವಿಷ್ಯದ ದೃಷ್ಟಿಯಿಂದ ದ್ವಿತೀಯ ಪಿಯುಸಿ ಮಹತ್ವದ ಘಟ್ಟವಾಗಿದ್ದು, ಹೀಗಾಗಿ ಆನ್ ಲೈನ್ ಕ್ಲಾಸ್ ನಡೆಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ಹೇಳಿದ್ದಾರೆ.
Kshetra Samachara
27/01/2022 01:11 pm