ಉಡುಪಿ: ಒಂದೂವರೆ ತಿಂಗಳುಗಳ ಕಾಲ ಹಿಜಾಬ್ ವಿವಾದ ನಡೆದಿದ್ದು,ಹಿಜಾಬ್ ಧರಿಸದೆ ಕಾಲೇಜಿಗೆ ಬರಲು ನಾಳೆ ಒಂದು ದಿನ ಅವಕಾಶ ಇದೆ.ಕಾಲೇಜಿಗೆ ಬರದಿದ್ದರೆ ಆನ್ಲೈನ್ ಕ್ಲಾಸ್ ಅವಕಾಶ ಮಾಡಲಾಗಿದೆ.ಇನ್ನು ವಿದ್ಯಾರ್ಥಿಗಳು ಹೆಸರಿಗಾಗಿ ಹಠ ಮಾಡುವುದು ಸರಿಯಲ್ಲ ಎಂದು ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ ಹೇಳಿದ್ದಾರೆ.
ಇಂದು ಶಾಲಾಭಿವೃದ್ಧಿ ಸಮಿತಿ ಮತ್ತು ಪೋಷಕರ ಜೊತೆ ಸಭೆಯಲ್ಲಿ ಪಾಲ್ಗೊಂಡ ರಹೀಂ ಉಚ್ಚಿಲ,ಹಿಜಾಬ್ ಗೆ ನಮ್ಮ ವಿರೋಧ ಇಲ್ಲ. ಅದು ಇಸ್ಲಾಂನ ಪದ್ಧತಿ.ಶರಿಯತ್ ಆಧಾರಿತ ರಾಷ್ಟ್ರ ಬೇರೆ. ಪ್ರಜಾಪ್ರಭುತ್ವ ರಾಷ್ಟ್ರ ಬೇರೆ.ಭಾರತದಲ್ಲಿ ಸರ್ಕಾರದ ಆದೇಶ ಪಾಲಿಸಲೇಬೇಕು.ನಾಳೆಯ ಒಳಗೆ ತೀರ್ಮಾನಕ್ಕೆ ಬರುವುದಾಗಿ ಮೂವರು ವಿದ್ಯಾರ್ಥಿನಿಯರು ಒಪ್ಪಿಕೊಂಡಿದ್ದಾರೆ.ಓರ್ವ ವಿದ್ಯಾರ್ಥಿನಿ ಹಿಜಾಬ್ ಗೆ ಪಟ್ಟು ಹಿಡಿದು ಅಭಿಪ್ರಾಯ ಹೇಳಿದ್ದಾಳೆ ಎಂದು ಉಡುಪಿಯಲ್ಲಿ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ ಹೇಳಿದ್ದಾರೆ.
PublicNext
31/01/2022 06:47 pm