ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಹಿಜಾಬ್ ಗೆ ಕೌಂಟರ್ : ಕುಂದಾಪುರ ಕಾಲೇಜಿಗೆ ಕೇಸರಿ ಶಾಲು ಹಾಕಿ ಬಂದ ವಿದ್ಯಾರ್ಥಿಗಳು!

ಕುಂದಾಪುರ: ಉಡುಪಿಯ ಸರಕಾರಿ ಕಾಲೇಜಿನ ಹಿಜಾಬ್ ವಿವಾದ ಬೇರೆಯೇ ಸ್ವರೂಪ ಪಡೆದುಕೊಳ್ಳುತ್ತಿದೆ.ಇಲ್ಲಿನ ವಿವಾದಕ್ಕೆ ಕೌಂಟರ್ ಎಂಬಂತೆ ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಗೆ ಪ್ರತಿಯಾಗಿ 40 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಂದು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ.ಇದರಿಂದಾಗಿ ಕಾಲೇಜಿನಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣಗೊಂಡಿತು.ಬಳಿಕ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಸಭೆ ನಡೆದಿದೆ.ಕುಂದಾಪುರದ ಕಾಲೇಜಿನಲ್ಲಿ ಕೆಲ ಮುಸ್ಲಿಂ ವಿದ್ಯಾರ್ಥಿನಿಯರು ಜಿಜಾಬ್ ಧರಿಸಿ ಕಾಲೇಜಿಗೆ ಬರುತ್ತಿದ್ದಾರೆ.ನಮಗೂ ಕೇಸರಿ ಶಾಲಿಗೆ ಅವಕಾಶ ನೀಡಬೇಕು ಎಂದು ಹಿಂದೂ ಸಂಘಟನೆ ಬೆಂಬಲಿತ ವಿದ್ಯಾರ್ಥಿಗಳು ಬೇಡಿಕೆ ಇಟ್ಟಿದ್ದಾರೆ.ಇರಿಂದಾಗಿ ಕುಂದಾಪುರದಲ್ಲಿ ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದ ತಲೆದೋರಿದೆ.

Edited By : Manjunath H D
PublicNext

PublicNext

02/02/2022 03:37 pm

Cinque Terre

43.13 K

Cinque Terre

46

ಸಂಬಂಧಿತ ಸುದ್ದಿ