ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: "ನಮ್ಮ ಕಲಿಕೆಗೆ ತೊಂದರೆಯಾಗುತ್ತಿದೆ" : ಜಿಲ್ಲಾಡಳಿತದ ಮೊರೆಹೋದ ವಿದ್ಯಾರ್ಥಿನಿಯರು

ಉಡುಪಿ: ಜಿಲ್ಲೆಯಲ್ಲಿ ಹಿಜಾಬ್ ವಿವಾದ ಭುಗಿಲೇಳುತ್ತಲೇ ಇತ್ತ ಇತರೆ ವಿದ್ಯಾರ್ಥಿನಿಯರು ಜಿಲ್ಲಾಡಳಿತದ ಮೊರೆಹೋಗಿದ್ದಾರೆ. ನಮ್ಮ ಕಾಲೇಜಿನ ಶೈಕ್ಷಣಿಕ ವಾತಾವರಣ ಹದಗೆಟ್ಟಿದೆ, ಪರೀಕ್ಷಾ ಸಮಯದಲ್ಲಿ ಕಾಲೇಜಿನಲ್ಲಿ ಕಲಿಕೆಯ ಬದಲಾಗಿ ಗಲಾಟೆ ಆರಂಭವಾಗಿದೆ.ಕೇವಲ ಆರು ವಿದ್ಯಾರ್ಥಿನಿಯರಿಂದಾಗಿ 600 ಮಕ್ಕಳ ಭವಿಷ್ಯ ಹಾಳಾಗುತ್ತಿದೆ.

ಶಾಲೆಯ ಆವರಣಕ್ಕೆ ನಿತ್ಯ ಪೊಲೀಸರು ಮತ್ತು ಮಾಧ್ಯಮದವರು ಬರುತ್ತಿದ್ದಾರೆ. ನಮ್ಮ ಕಾಲೇಜಿಗೆ ಹಲವಾರು ದಶಕಗಳ ಇತಿಹಾಸವಿದೆ. ಇಲ್ಲಿ ಯಾವುದೇ ರೀತಿಯ ತಾರತಮ್ಯ, ಅನ್ಯಾಯ ನಡೆಯುತ್ತಿಲ್ಲ.

ವಿನಾಕಾರಣ ವಿವಾದ ಸೃಷ್ಟಿಸಿ ಶೈಕ್ಷಣಿಕ ವಾತಾವರಣ ಹದಗೆಡಿಸಿದ್ದಾರೆ. ಹಾಗಾಗಿ ಸೂಕ್ತ ಕ್ರಮ ಕೈಗೊಂಡು ನಮ್ಮ ಕಲಿಕೆಗೆ ವ್ಯವಸ್ಥೆ ಮಾಡಿ ಎಂದು ಉಡುಪಿಯ ಬಾಲಕಿಯರ ಕಾಲೇಜಿನ ವಿದ್ಯಾರ್ಥಿನಿಯರು ಜಿಲ್ಲಾಧಿಕಾರಿಯನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ.

Edited By : Manjunath H D
Kshetra Samachara

Kshetra Samachara

04/02/2022 01:46 pm

Cinque Terre

10.43 K

Cinque Terre

4

ಸಂಬಂಧಿತ ಸುದ್ದಿ