ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ತರಗತಿಗೆ ಬಾರದವರಿಗಾಗಿ ಆನ್‌ಲೈನ್ ಕ್ಲಾಸ್ ನಡೆಸಲು ಚಿಂತನೆ: ಪ್ರಾಂಶುಪಾಲರು

ಉಡುಪಿ: ಉಡುಪಿಯ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಇವತ್ತು ಹಿಜಾಬ್ ವಿಚಾರವಾಗಿ ಕೆಲಕಾಲ ಗೊಂದಲ ಉಂಟಾಯಿತು. ನಂತರ ಹಿಜಾಬ್ ಕಳಚಿ ತರಗತಿಯಲ್ಲಿ ಕುಳಿತುಕೊಳ್ಳಲು ಇಚ್ಛಿಸದ ಕೆಲವು ವಿದ್ಯಾರ್ಥಿನಿಯರು ಮನೆಗೆ ವಾಪಾಸಾದರು. ಈ ಕುರಿತು ಮಾತನಾಡಿದ ಪ್ರಾಂಶುಪಾಲ ಭಾಸ್ಕರ್ ಶೆಟ್ಟಿ , ನ್ಯಾಯಾಲಯದ ಮಧ್ಯಂತರ ಆದೇಶವನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದ್ದೇವೆ. ಕೆಲವರು ಹಿಜಾಬ್ ತೆಗೆದಿರಿಸಿ ತರಗತಿಗೆ ಹಾಜರಾಗಿದ್ದಾರೆ.

ಬೆರಳೆಣಿಕೆಯ ವಿದ್ಯಾರ್ಥಿನಿಯರು ಹಿಜಾಬ್ ತೆಗೆಯಲು ನಿರಾಕರಿಸಿ ಮನೆಗೆ ಹೋಗಿದ್ದಾರೆ. ನ್ಯಾಯಾಲಯದ ಆದೇಶವನ್ನು ಮನವರಿಕೆ ಮಾಡಲು ಪ್ರಯತ್ನಿಸಿದ್ದೇವೆ. ತರಗತಿಗೆ ಬಾರದವರಿಗಾಗಿ ಆನ್‌ಲೈನ್ ಕ್ಲಾಸ್ ನಡೆಸುವ ಚಿಂತನೆ ಇದೆ. ವಿದ್ಯಾರ್ಥಿಗಳ ಪರೀಕ್ಷೆಗೆ ತೊಡಕು ಉಂಟಾಗದಂತೆ ಕಾಲೇಜಿನಿಂದ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

Edited By : Manjunath H D
Kshetra Samachara

Kshetra Samachara

16/02/2022 02:36 pm

Cinque Terre

7.73 K

Cinque Terre

3

ಸಂಬಂಧಿತ ಸುದ್ದಿ