ಉಡುಪಿ: ಉಡುಪಿಯ ಮಿಲಾಗ್ರಿಸ್ ಕಾಲೇಜಿನಲ್ಲಿ ಹಿಜಾಬ್ ವಿವಾದ ಹೊಸ ಸ್ವರೂಪ ಪಡೆದುಕೊಂಡಿದೆ.
ಇವತ್ತು ಹಿಜಾಬ್‌ಗೆ ಬೆಂಬಲ ಸೂಚಿಸಿ ನೂರಾರು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿದ್ದಾರೆ. ಮೂರು ದಿನಗಳಿಂದ ಹಿಜಾಬ್ ಧರಿಸಿದವರಿಗೆ ಅವಕಾಶ ನೀಡುತ್ತಿಲ್ಲ. ಪರೀಕ್ಷೆಗೂ ಬಿಡುತ್ತಿಲ್ಲ. ಹೀಗಾಗಿ ನಾವು ಹಿಜಾಬ್‌ಧಾರಿ ವಿದ್ಯಾರ್ಥಿನಿಯರಿಗೆ ಬೆಂಬಲ ನೀಡಿ ಹೊರ ಬಂದಿರುವುದಾಗಿ ವಿದ್ಯಾರ್ಥಿಗಳು ಹೇಳಿದ್ದಾರೆ. ಕಾಲೇಜಿನ ಹೊರ ಭಾಗದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
PublicNext
18/02/2022 12:57 pm