ಮಂಗಳೂರು: ಮಂಗಳೂರಿನ ಸರಕಾರಿ ಕಾಲೇಜ್ ವೊಂದರಲ್ಲಿ ಹಿಜಾಬ್ ವಿವಾದ ತಾರಕಕ್ಕೇರಿದೆ.ನಗರದ ರಥಬೀದಿಯ ಸರಕಾರಿ ಕಾಲೇಜ್ ನಲ್ಲಿ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದಿದೆ.
ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ನಿರಾಕರಿಸಿ ಕಾಲೇಜ್ ಪ್ರಾಂಶುಪಾಲರ ವಿರುದ್ಧ ಮುಸ್ಲಿಂ ವಿದ್ಯಾರ್ಥಿಗಳ ಕಾಲೇಜ್ ಗೇಟ್ ಬಳಿ ಪ್ರತಿಭಟನೆ ನಡೆಸಿದರು.
ಈ ಮಧ್ಯೆ ಅದೇ ಕಾಲೇಜ್ ವೊಂದರ ಕೆಲ ವಿದ್ಯಾರ್ಥಿಗಳು ಮುಸ್ಲಿಂ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.ಗೇಟ್ ಮುಂದೆ ಪ್ರತಿಭಟನೆನಿರತ ವಿದ್ಯಾರ್ಥಿಗಳು ಪ್ರಾಂಶುಪಾಲರನ್ನು ತರಾಟೆ ತೆಗೆದುಕೊಂಡು ಸಾಯಿ ಸಂದೇಶ್ ಎಂಬಾತ ಕೂಡಲೇ ಕ್ಷಮೆ ಕೊರುವಂತೆ ಒತ್ತಾಯಿಸಿದರು. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿ ಕಾಲೇಜ್ ಆವರಣದಲ್ಲಿ ಗಲಾಟೆ ಮಾಡದಂತೆ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ್ರು.
PublicNext
04/03/2022 07:18 pm