ಉಡುಪಿ: ತಮಗೆ ಹಿಜಾಬ್ ಹಕ್ಕು ಬೇಕೆಂದು ನ್ಯಾಯಾಲಯದ ಕದ ತಟ್ಟಿದ್ದ ಇಬ್ಬರು ಹಿಜಾಬ್ ಹೋರಾಟಗಾರ್ತಿಯರು ಪ್ರಥಮ ಪಿಯುಸಿ ಅಂತಿಮ ಪರೀಕ್ಷೆಗೆ ಗೈರಾಗಿದ್ದಾರೆ.
ಉಡುಪಿಯಲ್ಲಿ ಇಂದು ಪ್ರಥಮ ಪಿಯುಸಿ ಅಂತಿಮ ಪರೀಕ್ಷೆಗಳು ನಡೆಯುತ್ತಿವೆ.ಆದರೆ ಇಬ್ಬರು ಹಿಜಾಬ್ ಹೋರಾಟಗಾರ್ತಿಯರಾದ
ಮುಸ್ಕಾನ್ ಮತ್ತು ಸಫಾ ಪರೀಕ್ಷೆಗೆ ಗೈರಾಗಿದ್ದಾರೆ.
ಇವರು ಉಡುಪಿಯ ಸರಕಾರಿ ಪದವಿಪೂರ್ವ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ.ಈ ಇಬ್ಬರು ವಿದ್ಯಾರ್ಥಿನಿಯರು ಅಂತಿಮ ಪರೀಕ್ಷೆಗೆ ಗೈರಾಗಿರುವ ಬಗ್ಗೆ ಕಾಲೇಜಿನ ಆಡಳಿತ ಮಂಡಳಿಯ ಮೂಲಗಳು ಮಾಹಿತಿ ನೀಡಿವೆ.
Kshetra Samachara
29/03/2022 12:05 pm