ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಕರಾವಳಿ ಕಲೋತ್ಸವಕ್ಕೆ ಅದ್ಧೂರಿಯ ಜಾನಪದ ದಿಬ್ಬಣ

ಬಂಟ್ವಾಳ: ಚಿಣ್ಣರ ಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಬಂಟ್ವಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಏ.29ರ ಶುಕ್ರವಾರದಿಂದ ಮೇ 29ರವರೆಗೆ ಒಂದು ತಿಂಗಳ ಕಾಲ ಬಿ.ಸಿ.ರೋಡಿನ ಗೋಲ್ಡನ್ ಪಾರ್ಕ್ ಮೈದಾನದಲ್ಲಿ ನಡೆಯಲಿರುವ ಕರಾವಳಿ ಕಲೋತ್ಸವದ ಜಾನಪದ ದಿಬ್ಬಣಕ್ಕೆ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಚೆಂಡೆ ನುಡಿಸುವ ಮೂಲಕ ಶುಕ್ರವಾರ ಸಂಜೆ ಚಾಲನೆ ನೀಡಿದರು.

ಈ ಸಂದರ್ಭ ಕಲೋತ್ಸವ ಸಮಿತಿ ಅಧ್ಯಕ್ಷ ಸುದರ್ಶನ ಜೈನ್, ಸ್ಥಾಪಕ, ಪ್ರಧಾನ ಸಂಚಾಲಕ ಮೋಹನದಾಸ ಕೊಟ್ಟಾರಿ, ಚಿಣ್ಣರ ಅಧ್ಯಕ್ಷೆ ಜನ್ಯಪ್ರಸಾದ್, ಸ್ವಾಗತ ಸಮಿತಿ ಅಧ್ಯಕ್ಷ ಸರಪಾಡಿ ಅಶೋಕ ಶೆಟ್ಟಿ, ಉಪಾಧ್ಯಕ್ಷ ಪ್ರಕಾಶ್ ಬಿ.ಶೆಟ್ಟಿ ಶ್ರೀಶೈಲ, ಪದಾಧಿಕಾರಿಗಳಾದ ತೀರ್ಥಪ್ರಸಾದ್ ಅನಂತಾಡಿ, ಮಹಮ್ಮದ್ ನಂದಾವರ, ಶೈಲಜಾ ರಾಜೇಶ್, ದೇವಪ್ಪ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು. ಗೊಂಬೆ ಕುಣಿತ, ಚೆಂಡೆ ವಾದನ, ನೃತ್ಯ ಪ್ರಾಕಾರಗಳು, ಕೀಲುಕುಣಿತವೇ ಮೊದಲಾದ ಆಕರ್ಷಣೆಗಳು ಮೆರವಣಿಗೆಯಲ್ಲಿ ಕಂಡುಬಂದವು.

Edited By :
Kshetra Samachara

Kshetra Samachara

30/04/2022 09:46 am

Cinque Terre

7.64 K

Cinque Terre

0

ಸಂಬಂಧಿತ ಸುದ್ದಿ