ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಮುಖ್ಯೋಪಾಧ್ಯಾಯಿನಿಯಿಂದಲೇ ಸರಕಾರಿ ಶಾಲೆ ಅಭಿವೃದ್ಧಿಗೆ ಕಂಟಕ: ಮಾಜಿ ಕಾರ್ಪೊರೇಟರ್ ರಿಂದ ಏಕಾಂಗಿ ಧರಣಿ

ಮಂಗಳೂರು: ನಗರದ ಪಂಜಿಮೊಗರಿನಲ್ಲಿರುವ ದ.ಕ.ಜಿಪಂ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿಯೇ ಶಾಲೆಯ ಅಭಿವೃದ್ಧಿಗೆ ಕಂಟಕವಾಗಿದ್ದು, ಮಕ್ಕಳ ಸಂಖ್ಯೆ ಕುಸಿಯುವಂತೆ ಮಾಡುತ್ತಿದ್ದಾರೆ ಎಂದು ಮಾಜಿ ಕಾರ್ಪೊರೇಟರ್, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದಯಾನಂದ ಶೆಟ್ಟಿಯವರು ಇಂದಿನಿಂದ ಏಕಾಂಗಿಯಾಗಿ ಮಕ್ಕಳ ಪೋಷಕರೊಂದಿಗೆ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ.

ಮಕ್ಕಳಿಲ್ಲದೆ ಮುಚ್ಚುವ ಹಂತದಲ್ಲಿದ್ದ ಶಾಲೆಯನ್ನು ಉಳಿಸುವ ಅಭಿಯಾನ ಆರಂಭಿಸಲಾಗಿದ್ದು, ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸಲಾಗಿತ್ತು. ಆ ಬಳಿಕ ಶಾಲೆಯಲ್ಲಿ ಮಕ್ಕಳ ಸಂಖ್ಯೆಯಲ್ಲಿ ಹೆಚ್ಚಳವಾಗಿತ್ತು. ಶಾಲೆಯಲ್ಲಿ ಕನಿಷ್ಠ ಮಕ್ಕಳಿದ್ದ ಸಂದರ್ಭ ವೃಥಾ ಕಾಲ ಹರಣ ಕೆಲ ಶಾಲಾ ಶಿಕ್ಷಕಿಯರು, ಮುಖ್ಯೋಪಾಧ್ಯಾಯಿನಿಗೆ ಇದೀಗ ಮಕ್ಕಳು ಹೆಚ್ಚಳವಾಗುತ್ತಿರುವುದನ್ನು ಕಂಡು ಇರಿಸಿಮುರಿಸಾಗಿದೆ. ಇದರಿಂದ ಮಕ್ಕಳ ಸಂಖ್ಯೆಯನ್ನು ಕಡಿಮೆ ಮಾಡಲು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಪೂರ್ವ ಪ್ರಾಥಮಿಕ ಶಾಲೆಗಳನ್ನು ಮುಚ್ಚಲು ಹೊರಟಿದ್ದಾರೆ. ಈ ಮೂಲಕ ಶಾಲೆಯಲ್ಲಿ ಮಕ್ಕಳ ದಾಖಲಾತಿಯನ್ನು ಕಡಿಮೆ ಮಾಡಲು ಹವಣಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ‌.

ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ ಮಾತನಾಡಿ, ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೂ ಅಡ್ಡಗಾಲಿಟ್ಟು, ಮಕ್ಕಳ ದಾಖಲಾತಿಯನ್ನು ಕುಸಿಯುವಂತೆ ಮಾಡುವ ಮುಖ್ಯೋಪಾಧ್ಯಾಯಿನಿ‌ ಈ ಶಾಲೆಗೆ ಅಗತ್ಯವಿಲ್ಲ. ಈ ಬಗ್ಗೆ ಶಿಕ್ಷಣ ಇಲಾಖೆಯ ಗಮನ ಸೆಳೆದರೂ, ಮೂರು ಬಾರಿ ಮನವಿ ಪತ್ರ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಹತಾಶೆಯಿಂದ ಶಾಲಾ ಮಕ್ಕಳ ಪೋಷಕರ ಬೆಂಬಲದೊಂದಿಗೆ ಏಕಾಂಗಿಯಾಗಿ ಅನಿರ್ದಿಷ್ಟಾವಧಿ ಧರಣಿ ಮಾಡುತ್ತಿದ್ದೇನೆ ಎಂದು ಹೇಳಿದರು.

Edited By : Manjunath H D
Kshetra Samachara

Kshetra Samachara

04/08/2021 06:36 pm

Cinque Terre

16.35 K

Cinque Terre

2

ಸಂಬಂಧಿತ ಸುದ್ದಿ