ನೀರ್ಕೆರೆ:ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ನೀರ್ಕೆರೆ ಹಾಗೂ ಬಳ್ಳೆಚ್ಚಾರು ಶಾಲೆಯಲ್ಲಿ ದಾನಿಗಳಾದ ಸುರೇಶ್ ಶೆಟ್ಟಿ ಮೀನಾಕ್ಷಿದೋಟ ಮಿಜಾರು ವತಿಯಿಂದ ವಿದ್ಯಾರ್ಥಿಗಳಿಗೆ ನೀಡಲಾದ ಉಚಿತ ಪುಸ್ತಕ ವಿತರಣೆಯನ್ನು ಶಾಸಕ ಉಮಾನಾಥ್ ಕೋಟ್ಯಾನ್ ನೆರವೇರಿಸಿದರು. ಅವರು ಮಾತನಾಡಿ ಮಕ್ಕಳ ವಿದ್ಯಾ ಕಲಿಕೆಗೆ ದಾನಿಗಳ ಕೊಡುಗೆ ಶ್ಲಾಘನೀಯವಾಗಿದ್ದು ಸದುಪಯೋಗಪಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ನೂತನವಾಗಿ ಆರಂಭವಾದ ಒಂದನೇ ತರಗತಿಯ ಆಂಗ್ಲ ಮಾಧ್ಯಮ ಶಿಕ್ಷಣವನ್ನು ಶಾಸಕರು ಉದ್ಘಾಟಿಸಿದರು.
ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ, ಉಪಾಧ್ಯಕ್ಷೆ ಶಮಿತ ಶೆಟ್ಟಿ, ದಾನಿಗಳಾದ ಅಪ್ಪು ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ದೇವರಾಜ್, ಗ್ರಾಮ ಪಂಚಾಯತ್ ಸದಸ್ಯರುಗಳು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಿನೇಶ್ ಗೌಡ, ಉಪಾಧ್ಯಕ್ಷೆ ಜಯಲಕ್ಷ್ಮೀ ಶೆಟ್ಟಿಗಾರ್, ಸದಸ್ಯರುಗಳು , ಊರಿನ ಪ್ರಮುಖರು ಉಪಸ್ಥಿತರಿದ್ದರು.
Kshetra Samachara
09/08/2021 04:12 pm