ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅತಿಕಾರಿಬೆಟ್ಟು:"ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ವೀರ ಮಹಾತ್ಮರ ಆದರ್ಶಗಳನ್ನು ಯುವ ಜನಾಂಗ ರೂಡಿಸಿಕೊಳ್ಳಬೇಕು"

ಮುಲ್ಕಿ:ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ 75 ವಾರಗಳ ನಿರಂತರ ಕಾರ್ಯಕ್ರಗಳ‌ ಸರಣಿಯಲ್ಲಿ ಕೆಪಿಎಸ್ ಕೆ ಪ್ರೌಢಶಾಲೆ ಪಂಜಿನಡ್ಕ ಮತ್ತು ಅತಿಕಾರಿಬೆಟ್ಟು ಗ್ರಾಮಪಂಚಾಯತಿ ಸಹಯೋಗದಲ್ಲಿ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಕಚೇರಿಯಿಂದ ಗೂಗಲ್ ಮೀಟ್ ವೇದಿಕೆಯ ಮೂಲಕ "ಭಾರತ ಬಿಟ್ಟು ತೊಲಗಿ ಆಂದೋಲನ" ದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಿತು

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮುಲ್ಕಿ ವಿಜಯ ಕಾಲೇಜು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಫಮೀದಾ ಬೇಗಂ "ಭಾರತ ಬಿಟ್ಟು ತೊಲಗಿ" ಬಗ್ಗೆ ಉಪನ್ಯಾಸ ಮಂಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅತಿಕಾರಿಬೆಟ್ಟು ಗ್ರಾಪಂ ಅಧ್ಯಕ್ಷ ಮನೋಹರ ಕೋಟ್ಯಾನ್ ವಹಿಸಿ ಮಾತನಾಡಿ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ವೀರ ಮಹಾತ್ಮರ ಆದರ್ಶಗಳನ್ನು ಇಂದಿನ ಯುವ ಜನಾಂಗ ರೂಢಿಸಿಕೊಳ್ಳಬೇಕಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಶಾಲಾ ಮುಖ್ಯೋಪಾಧ್ಯಾಯರಾದ ಗ್ರೆಟ್ಟಾ ರೊಡ್ರಿಗಸ್, ಅಧ್ಯಾಪಕರಾದ ನೋಣಯ್ಯ ರೆಂಜಾಳ, ವೆಂಕಟರಮಣ ಕಾಮತ್, ಪಂಚಾಯತ್ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು. ಗ್ರಾಮಸ್ಥರು ವಿಶೇಷವಾಗಿ ವಿದ್ಯಾರ್ಥಿಗಳು ಗೂಗಲ್ ಮೀಟ್ ಮುಖಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Edited By : PublicNext Desk
Kshetra Samachara

Kshetra Samachara

09/08/2021 07:49 pm

Cinque Terre

7.06 K

Cinque Terre

0

ಸಂಬಂಧಿತ ಸುದ್ದಿ