ನೀರ್ಕೆರೆ: ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ನೀರ್ಕೆರೆ ಸರಕಾರಿ ಪ್ರೌಢಶಾಲೆ ಯಲ್ಲಿ ನಡೆದ ಶಾಲಾಭಿವೃದ್ಧಿ ಸಮಿತಿ ಸಭೆಯನ್ನು ಶಾಸಕ ಉಮಾನಾಥ್ ಕೋಟ್ಯಾನ್ ಅವರು ಉದ್ಘಾಟಿಸಿದರು. ಅವರು ವಿದ್ಯಾರ್ಥಿಗಳ ಪೋಷಕರನ್ನು ಉದ್ದೇಶಿಸಿ ಮಾತನಾಡಿ ಕೊರೊನಾ ಸಂಕಷ್ಟದ ದಿನಗಳಲ್ಲಿ ದಾನಿಗಳ ಮೂಲಕ ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹ ಶ್ಲಾಘನೀಯವಾಗಿದ್ದು ಶಾಲೆಯ ಅಭಿವೃದ್ಧಿಗೆ ಸರಕಾರದ ಮೂಲಕ ಪ್ರಯತ್ನಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ದಾನಿಗಳಾದ ಮಿಜಾರು ಸುರೇಶ್ ಶೆಟ್ಟಿ ಹರಿಮೀನಾಕ್ಷಿದೋಟ ರವರ ವತಿಯಿಂದ ವಿಧ್ಯಾರ್ಥಿಗಳಿಗೆ ನೀಡಲಾದ ಉಚಿತ ಪುಸ್ತಕಗಳನ್ನು ಶಾಸಕರು ವಿತರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶಮಿತಾ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕರುಣಾಕರ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರುಗಳು, ಶಾಲಾಭಿವೃದ್ಧಿ ಸಮಿತಿ ಸದಸ್ಯರುಗಳು, ಶಾಲಾ ಮುಖ್ಯೋಪಾಧ್ಯಾಯರು, ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.
Kshetra Samachara
17/08/2021 07:32 am