ಮುಲ್ಕಿ: ಭಾರತ ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳ ಹಿನ್ನೆಲೆಯಲ್ಲಿ 75 ವಾರಗಳ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಕಾರ್ಯಕ್ರಮಗಳ ಅಂಗವಾಗಿ ಅಗಸ್ಟ್ 2021ರ ಮಾಹೆಯಲ್ಲಿ ಸ್ವಾತಂತ್ರ್ಯದ ಮಹತ್ವ ಮತ್ತು ಹಿನ್ನಲೆಯ ಕುರಿತು ಕಿಲ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಿಲ್ಪಾಡಿ ಗ್ರಾಪಂ ಅಧ್ಯಕ್ಷೆ ಲೀಲಾವತಿ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕಿಲ್ಪಾಡಿ ಗ್ರಾಪಂ ಉಪಾಧ್ಯಕ್ಷ ಗೋಪಿನಾಥ ಪಡಂಗ ಮಾತನಾಡಿ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ
ಕಿಲ್ಪಾಡಿ ಗ್ರಾಪಂ ವತಿಯಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ವಿದ್ಯಾರ್ಥಿಗಳ ಸಾಧನೆಗೆ ಶಿಕ್ಷಕರ ಹೆತ್ತವರ ಪ್ರೋತ್ಸಾಹ ಶ್ಲಾಘನೀಯ ಎಂದರು.
ಕಿಲ್ಪಾಡಿ ಗ್ರಾಪಂ ಸದಸ್ಯ ಮಮತಾ ಶೆಟ್ಟಿ, ವಿಕಾಸ್ ಶೆಟ್ಟಿ,ಬಿರುವೆರ್ ಕುಡ್ಲ ಸಂಘಟನೆಯ ಕಿಶೋರ್, ತಾರಾನಾಥ್, ಶಿಕ್ಷಣ ಇಲಾಖೆಯ ನೀತಾ ತಂತ್ರಿ ಮತ್ತಿತರರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಸ್ವಾಗತಿಸಿದರು. ಸಬಿತಾ ಶೆಟ್ಟಿ ಧನ್ಯವಾದ ಅರ್ಪಿಸಿದರು. ಬಳಿಕ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತೆ ಬಗ್ಗೆ ಪ್ರಮಾಣವಚನ ಬೋಧಿಸಲಾಯಿತು.
Kshetra Samachara
24/08/2021 08:07 pm