ಮಂಗಳೂರು: ರಾಜ್ಯದಲ್ಲಿ ಈಗಾಗಲೇ ಪಿಯುಸಿ ತರಗತಿ ಈಗಾಗಲೇ ಆರಂಭವಾಗಿದ್ದರೂ, ಕೋವಿಡ್ ಪಾಸಿಟಿವಿಟಿ ರೇಟ್ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯಲ್ಲಿ ಇಂದಿನಿಂದ ದ್ವಿತೀಯ ಪಿಯುಸಿ ಭೌತಿಕ ತರಗತಿಗಳು ಆರಂಭವಾಗಿದೆ.
ಲಸಿಕೆ ಪಡೆದ ಶೇ.50 ರಷ್ಟು ವಿದ್ಯಾರ್ಥಿಗಳು ಭೌತಿಕ ತರಗತಿಗೆ ಹಾಜರಾಗಲು ಜಿಲ್ಲಾಡಳಿತ ಅನುಮತಿ ನೀಡಿತ್ತು. ಅಲ್ಲದೆ ಪ್ರಾಧ್ಯಾಪಕರು ಹಾಗೂ ಇತರ ಸಿಬ್ಬಂದಿ ಕಡ್ಡಾಯವಾಗಿ ಎರಡೂ ಲಸಿಕೆಯನ್ನು ಪಡೆದಿರಬೇಕು ಎಂದು ಜಿಲ್ಲಾಡಳಿತ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಎಲ್ಲರೂ ಎರಡೂ ಲಸಿಕೆ ಪಡೆದಿದ್ದರೂ, ದ್ವಿತೀಯ ಪಿಯುಸಿ ಹೆಚ್ಚಿನ ವಿದ್ಯಾರ್ಥಿಗಳು 17-18 ರ ವಯಸ್ಸಿನ ಒಳಗಿನವರಾದ ಕಾರಣ ಇನ್ನೂ ಲಸಿಕೆ ಹಾಕಿಸಲಾಗಿಲ್ಲ. ಈ ಹಿನ್ನೆಲೆಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಆನ್ಲೈನ್ ತರಗತಿಗಳನ್ನೇ ಆಯ್ಕೆ ಮಾಡಿಕೊಂಡಿದ್ದಾರೆ.
Kshetra Samachara
01/09/2021 11:55 am