ಮುಲ್ಕಿ: ಮುಲ್ಕಿ ತಾಲೂಕು ವ್ಯಾಪ್ತಿಯಲ್ಲಿ ಜಿಲ್ಲಾಡಳಿತದ ಆದೇಶದಂತೆ ಕೊರೋನಾ ನಿಯಮಗಳನ್ನು ಪಾಲಿಸಿಕೊಂಡು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಿದೆ. ಕಳೆದ ಕೊರೊನಾ ಸಂಕಷ್ಟದ ದಿನಗಳ ಬಳಿಕ ಮುಲ್ಕಿ ತಾಲೂಕು ವ್ಯಾಪ್ತಿಯ ಕಿನ್ನಿಗೋಳಿ-ಹಳೆಯಂಗಡಿ ಮುಲ್ಕಿ ನಗರದಲ್ಲಿ ದ್ವಿತೀಯ ಪಿಯುಸಿ ಭೌತಿಕ ತರಗತಿ ಆರಂಭಕ್ಕೆ ವಿದ್ಯಾರ್ಥಿಗಳ ಉತ್ತಮ ಪ್ರತಿಕ್ರಿಯೆ ದೊರೆತಿದೆ
ಮುಲ್ಕಿಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಭೌತಿಕ ತರಗತಿಗಳ ಆರಂಭದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಮಾಸ್ಕ್ ಕಲಿಕೆಗೆ ಪುಸ್ತಕಗಳನ್ನು ಉಚಿತವಾಗಿ ವಿತರಿಸಲಾಯಿತು. ಈ ಸಂದರ್ಭ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಮಾತನಾಡಿ ಸರಕಾರಿ ಕಾಲೇಜಿನಲ್ಲಿ ಈ ಬಾರಿ ವಿದ್ಯಾರ್ಥಿಗಳ ಕಲಿಕೆಗೆ ಶಾಸಕರ ಹಾಗೂ ದಾನಿಗಳ ನೆರವಿನಿಂದ ಅನೇಕ ಸೌಕರ್ಯಗಳನ್ನು ಒದಗಿಸಲಾಗಿದ್ದು ವಿದ್ಯೆ ಕಲಿತು ಕೀರ್ತಿ ವಂತರಾಗಿ ಎಂದರು
ಶಾಲಾ ಪ್ರಾಂಶುಪಾಲ ಡಾ. ವಾಸುದೇವ ಬೆಳ್ಳೆ ಮಾತನಾಡಿ ಜಿಲ್ಲಾಡಳಿತದ ಆದೇಶದಂತೆ ಮಕ್ಕಳ ಸುರಕ್ಷತಾ ಕ್ರಮಗಳನ್ನು ಕೈಗೊಂಡು ತರಗತಿಗಳನ್ನು ಆರಂಭಿಸಲಾಗಿದೆ ಎಂದರು. ಮುಂದಿನ ವರ್ಷ ಕಾಲೇಜು 50 ವರ್ಷ ಪೂರೈಸಲಿದ್ದು ಸಾಧಕರನ್ನು ಗೌರವಿಸಲಾಗುವುದು ಎಂದರು.
ಈ ಸಂದರ್ಭ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಎಂ ಬಿ ಖಾನ್, ಉಪನ್ಯಾಸಕಿ ಡಾ. ರೇಖಾ, ಅಶೋಕ್ ಭಂಡಾರಿ, ಕಾಲೇಜಿನ ಉಪನ್ಯಾಸಕ ವರ್ಗ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
01/09/2021 05:32 pm