ಮುತ್ತೂರು: ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಬೊಳಿಯ ಸರಕಾರಿ ಉನ್ನತೀಕೃತ ಹಿರಿಯ ಪ್ರಾಥಮಿಕ ಶಾಲೆಗೆ ಎಂ.ಆರ್.ಪಿ.ಎಲ್ ಸಂಸ್ಥೆಯ ಸಿ.ಎಸ್.ಆರ್.ಐ ನಿಧಿಯ ಸುಮಾರು 24 ಲಕ್ಷ ಅನುದಾನ ದಿಂದ ನಿರ್ಮಾಣಗೊಂಡ ಬಾಲಕರ ಮತ್ತು ಬಾಲಕಿಯರ ಶೌಚಾಲಯ, ಆವರಣ ಗೋಡೆ ಮತ್ತು ಮೇಲ್ಚಾವಣಿ ಹಾಗೂ ನೆಲದ ದುರಸ್ತಿ ಗೊಳಪಟ್ಟ ಕೊಠಡಿಯನ್ನು ಶಾಸಕ ಭರತ್ ಶೆಟ್ಟಿ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುತ್ತೂರು ಗ್ರಾಮ ಪಂಚಾಯತಿಯ ಅಧ್ಯಕ್ಷ ಸತೀಶ್ ಪೂಜಾರಿ ಬಳ್ಳಾಜೆ ಅವರು ವಹಿಸಿಕೊಂಡಿದ್ದರು. ಈ ಸಂದರ್ಭ ಮಾಜಿ ಜಿಪಂ ಸದಸ್ಯ ಜನಾರ್ಧನ ಗೌಡ, ಮುತ್ತೂರು ಗ್ರಾ.ಪಂ ಉಪಾಧ್ಯಕ್ಷೆ ಮಾಲತಿ, ಸದಸ್ಯರಾದ ಪುಷ್ಪ ನಾಯಕ್, ಪ್ರವೀಣ್ ಆಳ್ವ, ಸುಷ್ಮಾ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳಿಗೆ ನೀಡಿದ ಪಠ್ಯಪುಸ್ತಕವನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
Kshetra Samachara
12/09/2021 07:26 am