ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: 'ವಿದ್ಯಾರ್ಥಿಗಳನ್ನು ಗೌರವಿಸಿ ಪ್ರೋತ್ಸಾಹಿಸುವ ಕಾರ್ಯ ಶ್ಲಾಘನೀಯ'

ಮುಲ್ಕಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಾಹಿನಿ ಮುಲ್ಕಿ ಘಟಕದ ಆಶ್ರಯದಲ್ಲಿ 2020-21ರ ಶೈಕ್ಷಣಿಕ ಸಾಲಿನಲ್ಲಿ ಅತ್ಯಧಿಕ ಅಂಕ ಗಳಿಸಿದ ಬಿಲ್ಲವ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಡೆಯಿತು.

ಸಮಾರಂಭವನ್ನು ಮುಲ್ಕಿ ಶ್ರೀನಾರಾಯಣಗುರು ವಿದ್ಯಾಸಂಸ್ಥೆಯ ಆಡಳಿತ ಸಮಿತಿ ಅಧ್ಯಕ್ಷರಾದ ಭಾಸ್ಕರ್ ಸಾಲ್ಯಾನ್ ಉದ್ಘಾಟಿಸಿ ಮಾತನಾಡಿ, ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಿ ಪ್ರೋತ್ಸಾಹಿಸುವ ಕಾರ್ಯ ಶ್ಲಾಘನೀಯವಾಗಿದ್ದು, ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಉತ್ತಮ ರೀತಿಯಲ್ಲಿ ತಮ್ಮ ಭವಿಷ್ಯವನ್ನು ರೂಪಿಸಿಕೊಂಡು ರಾಷ್ಟ್ರಕ್ಕೆ ಮಾದರಿಯಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಘಟಕದ ಅಧ್ಯಕ್ಷರಾದ ಭರತೇಶ್ ಅಮೀನ್ ಮಟ್ಟು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಯ ಉಪಾಧ್ಯಕ್ಷರಾದ ರಾಜೇಶ್ ಬಂಟ್ವಾಳ, ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ರಮೇಶ್ ಅಮೀನ್ ಕೊಕ್ಕರ ಕಲ್, ಯುವವಾಹಿನಿ ಘಟಕದ ಕಾರ್ಯದರ್ಶಿ ಚರಿಷ್ಮಾ ಶ್ರೀನಿವಾಸ್ ಉಪಸ್ಥಿತರಿದ್ದರು. ಬಳಿಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.

Edited By : PublicNext Desk
Kshetra Samachara

Kshetra Samachara

17/09/2021 07:44 pm

Cinque Terre

3.58 K

Cinque Terre

0

ಸಂಬಂಧಿತ ಸುದ್ದಿ