ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ವಿದ್ಯಾರ್ಥಿಗಳಿಗೆ ಉದ್ಯೋಗ ತರಬೇತಿ ಮಾರ್ಗದರ್ಶನ, ಸಮಾಲೋಚನಾ ಕಾರ್ಯಕ್ರಮ

ಮುಲ್ಕಿ: ಮುಲ್ಕಿ ವಿಜಯಾ ಕಾಲೇಜು ಆಂತರಿಕ ಗುಣಮಟ್ಟ ಖಾತರಿ ಕೋಶ ವತಿಯಿಂದ ವಿದ್ಯಾರ್ಥಿಗಳಿಗೆ ಉದ್ಯೋಗ ತರಬೇತಿ ಮಾರ್ಗದರ್ಶನ ಹಾಗೂ ಸಮಾಲೋಚನಾ ಕಾರ್ಯಾಗಾರ ನಡೆಯಿತು.

ಕಾರ್ಯಾಗಾರವನ್ನು ಕಾಲೇಜಿನ ಪ್ರಾಂಶುಪಾಲ ಡಾಕ್ಟರ್ ಶ್ರೀಮಣಿ ಶೆಟ್ಟಿ ಉದ್ಘಾಟಿಸಿ, ಹೊಸ ಶಿಕ್ಷಣ ನೀತಿಯು ವಿದ್ಯಾರ್ಥಿಗಳಿಗೆ ಯಾವ ರೀತಿಯ ಉದ್ಯೋಗ ಅವಕಾಶವನ್ನು ನೀಡುತ್ತದೆ ಎಂದು ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ನಮ್ಮ ಕಾಲೇಜಿನ ಉದ್ಯೋಗ ಮಾಹಿತಿ ಮತ್ತು ತರಬೇತಿ ಕೇಂದ್ರದ ಸೌಲಭ್ಯವನ್ನು ವಿದ್ಯಾರ್ಥಿಗಳು ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಯುಎನ್ ಡಿಪಿ ಎಂಬ ಸಂಸ್ಥೆಯೊಂದಿಗೆ ತರಬೇತಿ ಕಾರ್ಯಕ್ರಮ ನಡೆಯಲಿದ್ದು, ಸಂಸ್ಥೆಯ ಗಣೇಶ್ ಭಾಗವತ್ ತರಬೇತಿಯ ಗುರಿ ಮತ್ತು ಉದ್ದೇಶಗಳನ್ನು ತಿಳಿಸಿದರು.

Edited By : PublicNext Desk
Kshetra Samachara

Kshetra Samachara

20/09/2021 03:59 pm

Cinque Terre

3.27 K

Cinque Terre

0

ಸಂಬಂಧಿತ ಸುದ್ದಿ