ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅತಿಕಾರಿಬೆಟ್ಟು : ಮಕ್ಕಳ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು: ಮನೋಹರ ಕೋಟ್ಯಾನ್

ಮುಲ್ಕಿ:ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಂಜಿನಡ್ಕ ಅಂಗನವಾಡಿಯಲ್ಲಿ ಬಾಲವಿಕಾಸ ಸಮಿತಿಯ ಸಭೆ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮನೋಹರ ಕೋಟ್ಯಾನ್ ಮಾತನಾಡಿ ಮಕ್ಕಳ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು, ಸರಕಾರವು ಅಂಗನವಾಡಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿದ್ದು ಸದುಪಯೋಗಪಡಿಸಿಕೊಳ್ಳಬೇಕಾಗಿದೆ ಎಂದರು.

ಶಾಲಾ ಮುಖ್ಯ ಶಿಕ್ಷಕರಾದ ಅಂಬರೀಷ ಲಮಾಣಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆ ನರ್ಮದಾ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

28/09/2021 03:39 pm

Cinque Terre

1.73 K

Cinque Terre

0

ಸಂಬಂಧಿತ ಸುದ್ದಿ