ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಪಂಚಾಯತ್‍ರಾಜ್ ಇಲಾಖೆಯ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಾಗಾರ

ಕೋಟ: ಕೋಟ ಕಾರಂತ ಥೀಂ ಪಾರ್ಕ್‌ನಲ್ಲಿ ಕೋಟ ವಿ-ಶೈನ್ ಕೋಚಿಂಗ್ ಸೆಂಟರ್ ಆಶ್ರಯದಲ್ಲಿ ರಾಜ್ಯದ ಪಂಚಾಯತ್‍ರಾಜ್ ಇಲಾಖೆಗೆ ಸಂಬಂಧಿಸಿ ನಡೆಯುತ್ತಿರುವ ಗ್ರಾ.ಪಂ. ಕಾರ್ಯದರ್ಶಿ ಮತ್ತು ಗ್ರಾಮಾಭಿವೃದ್ಧಿ ಸಹಾಯಕ ಗ್ರೇಡ್-2 ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳಿಗೆ ನಡೆಯುವ ಪರೀಕ್ಷೆಗೆ ಪೂರಕವಾಗಿ ಉಚಿತ ತರಬೇತಿ ಕಾರ್ಯಾಗಾರ ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್ ವಹಿಸಿದ್ದರು.

ಈ ಸಂದರ್ಭದಲ್ಲಿ ಪಂಚಾಯತ್‍ರಾಜ್ ತಜ್ಞ ಎಸ್.ಜನಾರ್ಧನ ಮರವಂತೆ, ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ನರೇಂದ್ರ ಕುಮಾರ್ ಕೋಟ, ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಗುರುಮೂರ್ತಿ, ಅಂಕಿತಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ವಿ-ಶೈನ್ ಕೋಚಿಂಗ್ ಸೆಂಟರ್ ಸಂಚಾಲಕ ಹರಿಶ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಗಿರೀಶ್ ಕುಮಾರ್ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು.ನರೇಂದ್ರ ಕುಮಾರ್ ಕೋಟ ಕಾರ್ಯಕ್ರಮ ನಿರೂಪಿಸಿದರು. ವಿವೇಕ್ ಅಮೀನ್ ವಂದಿಸಿದರು.

Edited By : Manjunath H D
Kshetra Samachara

Kshetra Samachara

04/10/2021 12:38 pm

Cinque Terre

18.83 K

Cinque Terre

0

ಸಂಬಂಧಿತ ಸುದ್ದಿ