ಕಾಪು: ಕೋವಿಡ್ ಹಾವಳಿಯಿಂದಾಗಿ ಒಂದೂವರೆ ವರ್ಷಗಳ ಬಳಿಕ ಕಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರಾರಂಭಿಸಲು ಸರಕಾರ ಹಸಿರು ನಿಶಾನೆ ತೋರಿದ್ದು, ಕಾಪು ತಾಲೂಕಿನ ವಿವಿಧ ಶಾಲೆಗಳಲ್ಲಿ ಅಧ್ಯಾಪಕರು, ಶಾಲಾಡಳಿತ ಮಂಡಳಿ, ಹಳೆ ವಿದ್ಯಾರ್ಥಿಗಳು ಮತ್ತು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮಕ್ಕಳನ್ನು ಬರಮಾಡಿಕೊಳ್ಳಲಾಯಿತು.
ಕಾಪು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಕರಂದಾಡಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಪಡು ಜಿಪಂ. ಹಿರಿಯ ಪ್ರಾಥಮಿಕ ಶಾಲೆ ಸೇರಿದಂತೆ ವಿದ್ಯಾರ್ಥಿಗಳನ್ನು ಶಾಲಾ ಪ್ರಾರಂಭೋತ್ಸವದ ಹಿನ್ನೆಲೆಯಲ್ಲಿ ಚೆಂಡೆ, ವಾದ್ಯ, ಗೊಂಬೆ ಕುಣಿತಗಳಿಂದ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ಕಾಪು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅವರು ಶಬರಿಮಲೆ ಅಯ್ಯಪ್ಪ ಸಮಾಜ (ಸಾಸ್) ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ "ಗೆಳೆಯರೆ, ಶಾಲೆಗೆ ಹೊರಡೋಣ ಬನ್ನಿ..." ಒಂದರಿಂದ ಐದನೇ ತರಗತಿಯ ಮಕ್ಕಳನ್ನು ಶಾಲೆಗೆ ಸ್ವಾಗತಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ತಾಲೂಕು ಮಟ್ಟದ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾಪು ಪುರಸಭೆಯ ಮಾಜಿ ಅಧ್ಯಕ್ಷ ಅನಿಲ್ ಕುಮಾರ್, ಸಮಾಜ ಸೇವಕ ಸುರೇಶ್ ಪಿ. ಶೆಟ್ಟಿ ಗುರ್ಮೆ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಸೇರಿದಂತೆ ಮುಂತಾದವರಿದ್ದರು.
Kshetra Samachara
25/10/2021 03:10 pm