ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ನಾನಾ ಬೇಡಿಕೆ ಈಡೇರಿಕೆ ಆಗ್ರಹಿಸಿ ಶಾಲಾ ಶಿಕ್ಷಕರಿಂದ ಪ್ರತಿಭಟನೆ

ಬ್ರಹ್ಮಾವರ: ಪ್ರಾಥಮಿಕ ಶಾಲಾ ಶಿಕ್ಷಕರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಎದುರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು.ಬಳಿಕ ಶಿಕ್ಷಣ ಸಚಿವರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಶಾಂತ ಶೆಟ್ಟಿ ಹಾವಂಜೆ ಅವರು ಬ್ರಹ್ಮಾವರದ ಕ್ಷೇತ್ರ ಶಿಕ್ಷಣಾಧಿಕಾರಿ ಒ.ಆರ್. ಪ್ರಕಾಶ್ ಮೂಲಕ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಕಳೆದ ತಿಂಗಳ 29 ರಂದು ಬೆಳಗಾವಿಯಲ್ಲಿ ಮತ್ತು 16ರಂದು ತುಮಕೂರಿನಲ್ಲಿ ಮಹತ್ವದ ಕಾರ್ಯಕಾರಿ ಸಮಿತಿ ಸಭೆ ನಡೆದಿತ್ತು. ಆ ಸಭೆಯ ತೀರ್ಮಾನದಂತೆ ಶಿಕ್ಷಕರ ಪ್ರಮುಖ ಬೇಡಿಕೆಗಳಾದ ಪದವೀಧರ ಶಿಕ್ಷಕರ ಸಮಸ್ಯೆ, ನೇಮಕಾತಿ ನಿಯಮಗಳ ತಿದ್ದುಪಡಿ, ನೂತನ ಪಿಂಚಣಿ ಯೋಜನೆ ರದ್ದುಗೊಳಿಸುವುದು, ಸೇವಾವಧಿಯಲ್ಲಿ ಶಿಕ್ಷಕರು ಬಯಸುವ ಜಿಲ್ಲೆಗೆ ಒಂದು ಬಾರಿ ವರ್ಗಾವಣೆ, ಮುಖ್ಯ ಗುರುಗಳಿಗೆ 15, 20, 25 ವರ್ಷಗಳ ವೇತನ ಭಡ್ತಿ, ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆ, ದೈಹಿಕ ಶಿಕ್ಷಕರ ಸಮಸ್ಯೆ... ಹೀಗೆ ಹಲವು ಪ್ರಮುಖ ಬೇಡಿಕೆಗಳನ್ನು ಸರಕಾರದ ಮುಂದಿಟ್ಟು ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಸಂಘದ ಕಾರ್ಯದರ್ಶಿ ರಾಮಚಂದ್ರ ವಾಕುಡ, ಕೋಶಾಧಿಕಾರಿ ಗೋಪಾಲ ನಾಯ್ಕ, ಜಿಲ್ಲಾಧ್ಯಕ್ಷ ಅಂಪಾರು ದಿನಕರ ಶೆಟ್ಟಿ, ಪ್ರಮುಖರಾದ ಕಿರಣ್ ಹೆಗ್ಡೆ, ಶಾಂತರಾಜ ಶೆಟ್ಟಿ, ಸತೀಶ್ಚಂದ್ರ ಶೆಟ್ಟಿ , ಮಂಜುಳಾ ಜಯಕರ್ ಇನ್ನಿತರರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

27/10/2021 12:02 pm

Cinque Terre

7.63 K

Cinque Terre

0

ಸಂಬಂಧಿತ ಸುದ್ದಿ