ಮುಲ್ಕಿ: ಮುಲ್ಕಿ ತಾಲೂಕು ವ್ಯಾಪ್ತಿಯ ಮುಲ್ಕಿ ನಗರ ಪಂಚಾಯತ್, ಕಿನ್ನಿಗೋಳಿ ಪಟ್ಟಣ ಪಂಚಾಯತ್, ಹಳೆಯಂಗಡಿ, ಪಡುಪಣಂಬೂರು, ಅತಿಕಾರಿಬೆಟ್ಟು, ಐಕಳ, ಬಳ್ಕುಂಜೆ, ಕಿಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಂಗನವಾಡಿ ಶಾಲಾ ಪ್ರಾರಂಭೋತ್ಸವ ಸಂಭ್ರಮದಿಂದ ನಡೆಯಿತು
.
ರಾಜ್ಯಮಟ್ಟದಲ್ಲಿ ಗುರುತಿಸಿರುವ ಪಡುಪಣಂಬೂರು ಗ್ರಾಪಂನ ತೋಕೂರು ಶ್ರೀ ಸುಬ್ರಹ್ಮಣ್ಯ ಅಂಗನವಾಡಿ ಶಾಲಾ ಪ್ರಾರಂಭೋತ್ಸವ ವಿಜ್ರಂಭಣೆಯಿಂದ ನಡೆಯಿತು. ಪಡುಪಣಂಬೂರು ಗ್ರಾಪಂ ಮಾಜಿ ಅಧ್ಯಕ್ಷ ಮೋಹನ ದಾಸ್ ಹಾಗೂ ಪಂಚಾಯತ್ ಸದಸ್ಯರು , ಮಕ್ಕಳ ಪೋಷಕರು ಅಂಗನವಾಡಿ ಶಿಕ್ಷಕಿ ಪ್ರೇಮಲತಾ ಯೋಗೀಶ್ ನೇತೃತ್ವದಲ್ಲಿ ಮಕ್ಕಳನ್ನು ಮೆರವಣಿಗೆ ಮೂಲಕ ಶಾಲೆಗೆ ಬರಮಾಡಿಕೊಂಡು ಗುಲಾಬಿ ಹೂ ನೀಡಿ ಸ್ವಾಗತಿಸಲಾಯಿತು
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮೋಹನದಾಸ್ ಮಾತನಾಡಿ ಕೊರೊನಾ ಮಹಾಮಾರಿ ಯಿಂದ ಮುಚ್ಚಲ್ಪಟ್ಟಿದ್ದ ಅಂಗನವಾಡಿ ಶಾಲೆಗಳು ತೆರೆದಿದ್ದು ಕೊರೋನಾ ಬಗ್ಗೆ ನಿರ್ಲಕ್ಷ ಬೇಡ ಎಚ್ಚರಿಕೆ ವಹಿಸಿ ಎಂದು ಹೇಳಿ ಮಕ್ಕಳಿಗೆ ಶುಭಾಶಯ ಕೋರಿದರು.
ಈ ಸಂದರ್ಭ ಪಂ. ಸದಸ್ಯರಾದ ಜ್ಯೋತಿ, ಅನಿಲ್, ನಮಿತ ,ಪವಿತ್ರ, ಅಂಗನವಾಡಿ ಸಹಾಯಕಿ ವಿಶಾಂತಿ, ಬಾಲವಿಕಾಸ ಸಮಿತಿ ಅಧ್ಯಕ್ಷೆ ರೇಷ್ಮಾ ಮತ್ತಿತರರು ಉಪಸ್ಥಿತರಿದ್ದರು.
ಮುಲ್ಕಿ ತಾಲೂಕು ವ್ಯಾಪ್ತಿಯ ವಿವಿಧೆಡೆಗಳಲ್ಲಿ ಅಂಗನವಾಡಿ ಕೇಂದ್ರಗಳಿಗೆ ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಿ ಹೂಗುಚ್ಛ ನೀಡಿ ಸತ್ಕರಿಸಲಾಯಿತು.
Kshetra Samachara
08/11/2021 12:37 pm