ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅತಿಕಾರಿಬೆಟ್ಟು: ಅಂಗನವಾಡಿ ಕೇಂದ್ರಗಳಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ

ಮುಲ್ಕಿ: ಮುಲ್ಕಿ ಸಮೀಪದ ಅತಿಕಾರಿಬೆಟ್ಟು ಗ್ರಾಮಪಂಚಾಯತ್ ವ್ಯಾಪ್ತಿಯ ಪಂಜಿನಡ್ಕ, ಕಕ್ವ, ಶಿಮಂತೂರು ಮೈಲೊಟ್ಟು ಅಂಗನವಾಡಿ ಕೇಂದ್ರಗಳಲ್ಲಿ ಶಾಲಾ ಪ್ರಾರಂಭೋತ್ಸವ ಪಂಚಾಯತ್ ಅಧ್ಯಕ್ಷ ಮನೋಹರ ಕೋಟ್ಯಾನ್ ನೇತೃತ್ವದಲ್ಲಿ ಸಂಭ್ರಮದಿಂದ ನಡೆಯಿತು.

ಈ ಸಂದರ್ಭ ಮನೋಹರ ಕೋಟ್ಯಾನ್ ಮಾತನಾಡಿ ಮಕ್ಕಳಿಗೆ ತಾಯಿಯೇ ಮೊದಲ ಪಾಠಶಾಲೆ ಎಂಬಂತೆ ಬಳಿಕ ಅಂಗನವಾಡಿ ಶಾಲೆ ಮಕ್ಕಳ ಶಿಕ್ಷಣದ ಕೇಂದ್ರವಾಗಿದ್ದು ಸರಕಾರದ ನೀತಿ ನಿಯಮಗಳನ್ನು ಪಾಲಿಸಿಕೊಂಡು ಕೊರೊನಾ ಬಗ್ಗೆ ಎಚ್ಚರಿಕೆವಹಿಸಿ ಎಂದು ಶಿಕ್ಷಕರಿಗೆ ಕಿವಿಮಾತು ಹೇಳಿದರು.

ಅತಿಕಾರಿಬೆಟ್ಟು ಗ್ರಾಪಂ ವ್ಯಾಪ್ತಿಯ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಪಂಚಾಯತ್ ಅಧ್ಯಕ್ಷ ಮನೋಹರ ಕೋಟ್ಯಾನ್ ವಿನಂತಿ ಮೇರೆಗೆ ಸ್ಯಾನಿಟೈಸ್ ಮಾಡಲು ಸಹಕರಿಸಿದ ಮುಲ್ಕಿ ನಪಂ ಅಧ್ಯಕ್ಷ ಸುಭಾಶ್ ಶೆಟ್ಟಿ ಹಾಗೂ ಮುಖ್ಯಾಧಿಕಾರಿ ಚಂದ್ರಪೂಜಾರಿ ರವರಿಗೆ ಕಾರ್ಯಕ್ರಮದಲ್ಲಿ ಧನ್ಯವಾದ ಅರ್ಪಿಸಿದರು.

Edited By : PublicNext Desk
Kshetra Samachara

Kshetra Samachara

08/11/2021 12:46 pm

Cinque Terre

2.11 K

Cinque Terre

0

ಸಂಬಂಧಿತ ಸುದ್ದಿ