ಪುತ್ತೂರು: ವಿದ್ಯಾರ್ಥಿನಿಯೊಂದಿಗೆ ವಿದ್ಯಾರ್ಥಿ ಮಾತನಾಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗೆ ವಿದ್ಯಾರ್ಥಿಗಳ ತಂಡವೊಂದು ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿ ಹಲ್ಲೆಗೊಳಗಾದ ವಿದ್ಯಾರ್ಥಿ ಸರಕಾರಿ ಆಸ್ಪತ್ರೆಗೆ ದಾಖಲಾದ ಘಟನೆ ನ.23 ರಂದು ಕೊಂಬೆಟ್ಟು ಸರಕಾರಿ ಪಿಯು ಕಾಲೇಜಿನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ಸಸ್ಪೆಂಡ್ ಮಾಡಿದ್ದಾರೆಂದು ಆರೋಪಿಸಿ ಇಂದು ಕಾಲೇಜು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದು, ಅಖಲ ಭಾರತ ವಿದ್ಯಾರ್ಥಿ ಪರಿಷತ್ ಸಾಥ್ ನೀಡಿದೆ.
ಈ ಸಂದರ್ಭ ಮಾತನಾಡಿದ ಎಬಿವಿಪಿ ವಿಭಾಗ ಸಂಚಾಲಕ ಸಂದೇಶ್, ಕಾಲೇಜು ಕ್ಯಾಂಪಸ್ ನಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿನಿಯರನ್ನು ಪ್ರೀತಿಯ ಬಲೆಯಲ್ಲಿ ಸಿಲುಕಿಸಿ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುವ ಘಟನೆ ನಿರಂತರ ನಡೆಯುತ್ತಿದೆ. ಇದೇ ವಿಚಾರಕ್ಕೆ ಸಂಬಂಧಿಸಿ ಕಾಲೇಜಿನಲ್ಲಿ ಅಹಿತಕರ ಘಟನೆ ನಡೆಯುತ್ತಿದ್ದು, ಈ ನಡುವೆ ಹೊರಗಿನ ವ್ಯಕ್ತಿಗಳು ಕಾಲೇಜು ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿದ್ದು, ಈ ವ್ಯಕ್ತಿಗಳ ವಿರುದ್ಧ ಪ್ರಾಂಶುಪಾಲರು ಕ್ರಮ ಕೈಗೊಳ್ಳುವ ಬದಲು ಕಾಲೇಜು ವಿದ್ಯಾರ್ಥಿಗಳ ಮೇಲೆಯೇ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಈ ಸಂದರ್ಭ ಮಾತನಾಡಿದ ಕಾಲೇಜು ಪ್ರಾಂಶುಪಾಲರು, ಯಾವುದೇ ವಿದ್ಯಾರ್ಥಿಗಳನ್ನು ಸಸ್ಪೆಂಡ್ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು.
Kshetra Samachara
24/11/2021 12:18 pm