ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: "ನಮ್ಮ ಸೇವೆಯನ್ನು ಖಾಯಂಗೊಳಿಸಿ"ಅತಿಥಿ ಉಪನ್ಯಾಸಕರಿಂದ ಜಾಥಾ,ಧರಣಿ

ಮಣಿಪಾಲ: ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನಮ್ಮ ಸೇವೆಯನ್ನು ಖಾಯಂಗೊಳಿಸಿ ಎಂದು ಆಗ್ರಹಿಸಿ ಉಡುಪಿಯಲ್ಲಿಂದು ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಜಾಥಾ ನಡೆಸಿದರು.ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದತನಕ ಜಾಥಾ ನಡೆಸಿದ ಉಪನ್ಯಾಸಕರು ಬಳಿಕ ಕಚೇರಿ ಮುಂದೆ ಧರಣಿ ನಡೆಸಿದರು.ಮುಖ್ಯವಾಗಿ ಹದಿನೈದು ಇಪ್ಪತ್ತು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನಮ್ಮನ್ನು ಸರಕಾರ ಖಾಯಂ ನೌಕರರನ್ನಾಗಿ ಮಾಡಬೇಕು ಎಂದು ಹಲವು ಬಾರಿ ಮನವಿ ಮಾಡಿದ್ದೆವು.ಸರಕಾರ ನಮ್ಮ ಬೇಡಿಕೆಯನ್ನು ಈಡೇರಿಸುತ್ತಿಲ್ಲ.ಈ ಸಂಬಂಧ ಹೋರಾಟಗಳನ್ನು ನಡೆಸಿದರೂ ಸರಕಾರ ನಮ್ಮನ್ನು ನಿರ್ಲಕ್ಷಿಸುತ್ತಲೇ ಬಂದಿದೆ.ಇದೀಗ ಸಮಿತಿ ರಚನೆ ಮಾಡುತ್ತೇವೆ ಎಂದು ಹೇಳುತ್ತಿದೆ.ಈ ಅಧಿವೇಶನದಲ್ಲೇ ನಮ್ಮ ಬೇಡಿಕೆ ಈಡೇರಿಕೆ ಮಾಡಬೇಕು.ಇಲ್ಲದಿದ್ದರೆ ಇನ್ನು ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದು ಅತಿಥಿ ಉಪನ್ಯಾಸಕರು ಅಸಮಾಧಾನ ವ್ಯಕ್ತಪಡಿಸಿದರು.ಕೊನೆಗೆ ಡಿಸಿ ಮೂಲಕ ಮನವಿ ಸಲ್ಲಿಸಲಾಯಿತು.

Edited By : Manjunath H D
Kshetra Samachara

Kshetra Samachara

22/12/2021 12:48 pm

Cinque Terre

10.46 K

Cinque Terre

0

ಸಂಬಂಧಿತ ಸುದ್ದಿ