ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿನ್ನಿಗೋಳಿ: ಪಾಂಪೆ ಕಾಲೇಜಿನಲ್ಲಿ ಸ್ಕಾರ್ಫ್- ಕೇಸರಿ ಶಾಲು ವಿವಾದ

ಮುಲ್ಕಿ:ಕಿನ್ನಿಗೋಳಿ ಸಮೀಪದ ದಾಮಸ್ಕಟ್ಟೆ ಪಾಂಪೆ ಕಾಲೇಜಿನಲ್ಲಿ ಸ್ಕಾರ್ಪ್ ವಿವಾದ ಪ್ರಾರಂಭವಾಗಿದ್ದು ಕಾಲೇಜಿನಲ್ಲಿ ವಿದ್ಯಾರ್ಥಿಗಳ ರಾದ್ಧಾಂತ ತಾರಕಕ್ಕೇರಿದೆ.

ಕಾಲೇಜಿನಲ್ಲಿ ಅನ್ಯಕೋಮಿನ ವಿದ್ಯಾರ್ಥಿನಿಗಳು ಸ್ಕಾರ್ಪ್ ಹಾಕಿ ತರಗತಿ ಹಾಜರಾದ ಕಾರಣ, ಹಿಂದೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಕೇಸರಿ ಶಾಲು ಹಾಕಿ ತರಗತಿ ಹಾಜರಾಗಿದ್ದಾರೆ.

ಸ್ಕಾರ್ಪ್ ಬಗ್ಗೆ ಶಾಲಾ ಆಡಳಿತ ಮಂಡಳಿಗೆ ತಿಳಿಸಿದ್ದು ಬುಧವಾರ ಮದ್ಯಾಹ್ನ ಕಾಲೇಜಿಗೆ ರಜೆ ನೀಡಿದ್ದು ಈ ಬಗ್ಗೆ ಆಡಳಿತ ಮಂಡಳಿ ಸಭೆ ನಡೆದಿದೆ ಎನ್ನಲಾಗಿದೆ.

ಮುಸ್ಲಿಂ ವಿದ್ಯಾರ್ಥಿನಿಯರು ಸ್ಕಾರ್ಪ್ ತೆಗೆಯುವ ತನಕ ನಾವು ಕೇಸರಿ ಶಾಲು ತೆಗೆಯುದಿಲ್ಲ , ನಮಗೆ ಹಿಂದು ಸಂಘಟನೆಗಳು ಬೆಂಬಲ ಸೂಚಿಸಿದ್ದಾರೆ .

ಇದು ಪ್ರಾರಂಭವಾಗಿದ್ದು ಮುಂದಿನ ದಿನಗಳಲ್ಲಿ ಕ್ರಿಶ್ಚಿಯನ್ ಕಾಲೇಜನ್ನು ಹಿಂದೂ ಕಾಲೇಜು ಮಾಡಿ ತೋರಿಸುತ್ತೇವೆ ಎಂದು ವಿದ್ಯಾರ್ಥಿಗಳು ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಒಟ್ಟಾರೆಯಾಗಿ ಕಳೆದ ಕೆಲವು ದಿನಗಳಿಂದ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಕೇಸರಿ ಶಾಲು - ಸ್ಕಾರ್ಫ್ ವಿವಾದ ತಾರಕಕ್ಕೇರಿದ್ದು ಮುಂದಿನ ಬೆಳವಣಿಗೆಗಳು ಕುತೂಹಲಕರವೆನಿಸಿದೆ

Edited By : Nagesh Gaonkar
Kshetra Samachara

Kshetra Samachara

05/01/2022 10:05 pm

Cinque Terre

17.29 K

Cinque Terre

4

ಸಂಬಂಧಿತ ಸುದ್ದಿ