ಮುಲ್ಕಿ: ಮುಲ್ಕಿ ಸರಕಾರಿ ಜೂನಿಯರ್ ಕಾಲೇಜು ಹಾಗೂ ಪ್ರೌಢಶಾಲೆಯ ಅಭಿವೃದ್ಧಿ ಸಮಿತಿ ಹಾಗೂ ಶಿಕ್ಷಕರ ಸಭೆ ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾಲೇಜಿನ ಪ್ರಾಂಶುಪಾಲರಾದ ಡಾ. ವಾಸುದೇವ ಬೆಳ್ಳೆ ಮಾತನಾಡಿ ಶಾಲೆ ಹಾಗೂ ಕಾಲೇಜಿನ ಅಭಿವೃದ್ಧಿ ಬಗ್ಗೆ ಅಭಿವೃದ್ಧಿ ಸಮಿತಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಸಹಕಾರ ಅಗತ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ ಸರಕಾರಿ ಶಾಲೆಯ ಅಭಿವೃದ್ಧಿಗೆ ತಾನು ಬದ್ದನಾಗಿದ್ದು ದಾನಿಗಳ ಹಾಗೂ ಸರಕಾರದ ಶಿಕ್ಷಣ ಇಲಾಖೆಯ ನೆರವಿನಿಂದ ಮೂಲಭೂತ ಸೌಕರ್ಯಗಳನ್ನು ಒದಗಿಸುವುದಾಗಿ ಆಶ್ವಾಸನೆ ನೀಡಿದರು. ಶಾಲಾ ಆವರಣದಲ್ಲಿರುವ ಲೋಕೋಪಯೋಗಿ ಇಲಾಖೆಯ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು ತೆರವುಗೊಳಿಸಿ ಮಕ್ಕಳ ಶಿಕ್ಷಣಕ್ಕೆ ಮತ್ತಷ್ಟು ಪ್ರೋತ್ಸಾಹ ನೀಡುವುದಾಗಿ ತಿಳಿಸಿದರು.
ಶಾಲೆಯ ಸೊತ್ತುಗಳನ್ನು ನಾಶ ಪಡಿಸುವುವವರ ವಿರುದ್ಧ ಈಗಾಗಲೇ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಲಾಗಿದ್ದು ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದ್ದೇನೆ ಎಂದರು.
ಈ ಸಂದರ್ಭ ಮುಲ್ಕಿ ನಪಂ ಅಧ್ಯಕ್ಷ ಸುಭಾಷ್ ಶೆಟ್ಟಿ, ಉಪಾಧ್ಯಕ್ಷ ಸತೀಶ್ ಅಂಚನ್, ಶಾಲಾಭಿವೃದ್ಧಿ ಸಮಿತಿಯ ಪುತ್ತುಬಾವ, ಹರ್ಷರಾಜ ಶೆಟ್ಟಿ, ಅಶೋಕ್ ಕುಮಾರ್ ಶೆಟ್ಟಿ, ಎಂ ಬಿ ಖಾನ್, ಮುರಳಿದರ ಭಂಡಾರಿ, ಶಮೀನ ಆಳ್ವ, ಮುಲ್ಕಿ ನಪಂ ಮುಖ್ಯಾಧಿಕಾರಿ ಚಂದ್ರಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
31/01/2022 02:02 pm