ಸುಳ್ಯ: ಗಾಂಧಿನಗರ ತರ್ಬಿಯತುಲ್ ಇಸ್ಲಾಂ ಜಮಾಅತ್ ಕಮಿಟಿ ಇದರ ಆಶ್ರಯದಲ್ಲಿ ಹತ್ತನೆಯ ತರಗತಿ ವಿದ್ಯಾರ್ಥಿ ವಿದ್ಯಾರ್ಥಿನಿ ಗಳಿಗೆ ಪರೀಕ್ಷಾ ಪೂರ್ವ ತರಬೇತಿ ಶಿಬಿರ ಫೆ 19 ರಂದು ಗಾಂಧಿನಗರ ಮದರಸ ಸಭಾಂಗಣದಲ್ಲಿ ನಡೆಯಿತು.
ಮಂಗಳೂರಿನ ಖ್ಯಾತ ತರಬೇತುದಾರ ಸಂಪನ್ಮೂಲ ವ್ಯಕ್ತಿ ರಫೀಕ್ ಮಾಸ್ಟರ್ ಮಂಗಳೂರು ತರಬೇತಿ ನೀಡಿದರು.
ಶಿಬಿರದಲ್ಲಿ ಸುಳ್ಯ ತಾಲೂಕಿನ ವಿವಿಧ ಭಾಗಗಳ ಸರಕಾರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳು, ಖಾಸಗಿ ಶಾಲೆಯ ವಿದ್ಯಾರ್ಥಿಗಳು, ದಹ್ವಾ ವಿದ್ಯಾರ್ಥಿಗಳು ಹೇಗೆ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಶಿಕ್ಷಣ ಸಂಘಗಳ ಒಕ್ಕೂಟದ ಅಧ್ಯಕ್ಷ ಮೂಸಬ್ಬ ಜೋಕಟ್ಟೆ, ಗಾಂಧಿನಗರ ಜಮಾಅತ್ ಕಮಿಟಿಯ ಅಧ್ಯಕ್ಷ ಹಾಜಿ ಕೆಎಂ ಮುಸ್ತಫ, ಕಾರ್ಯದರ್ಶಿ ಕೆ ಬಿ ಅಬ್ದುಲ್ ಮಜೀದ್, ಅನ್ಸಾರಿಯ ಎಜುಕೇಶನಲ್ ಸೆಂಟರ್ ಇದರ ಕಾರ್ಯದರ್ಶಿ ಲತೀಫ್ ಹರ್ಲಡ್ಕ, ಹಿರಿಯರಾದ ಹಾಜಿ ಮೈದಿನ್ ಫ್ಯಾನ್ಸಿ, ಹಾಜಿ ಅಬ್ದುಲ್ ಖಾದರ್ ಫ್ಯಾನ್ಸಿ, ಅಬ್ದುಲ್ ಹಮೀದ್ ಬೀಜ ಕೊಚ್ಚಿ, ಮೊದಲಾದವರು ಉಪಸ್ಥಿತರಿದ್ದರು. ಸೈಯದ್ ಹುಸೇನ್ ತಂಗಳ್ ಕಾರ್ಯಕ್ರಮ ಉದ್ಘಾಟಿಸಿದರು.
Kshetra Samachara
19/02/2022 03:24 pm