ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡುಬಿದಿರೆ: ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ದಾಖಲಾತಿಗೆ ಹರಿದು ಬಂದ ವಿದ್ಯಾರ್ಥಿಸಾಗರ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಂಗ ಸಂಸ್ಥೆ, ಕರ್ನಾಟಕ ಸರಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ರಾಜ್ಯದ ನಂ. 1 ಕನ್ನಡ ಮಾಧ್ಯಮ ಶಾಲೆಯಾಗಿ ಗುರುತಿಸಿಕೊಂಡಿರುವ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ 2022-23ನೇ ಸಾಲಿನ 6ರಿಂದ 9ನೇ ತರಗತಿಯ ಸಂಪೂರ್ಣ ಉಚಿತ ಶಿಕ್ಷಣ ಸೌಲಭ್ಯಕ್ಕೆ ನಡೆಸುವ ಪ್ರವೇಶ ಪರೀಕ್ಷೆಯು ಪುತ್ತಿಗೆ ವಿವೇಕಾನಂದ ನಗರದಲ್ಲಿ ಭಾನುವಾರ ನಡೆಯಿತು.

ರಾಜ್ಯಾದ್ಯಂತ 26 ಜಿಲ್ಲೆಗಳ 11,362 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು, 10,764 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು. 6ನೇ ತರಗತಿಗೆ 5628, 7ನೇ ತರಗತಿಗೆ 1936, 8ನೇ ತರಗತಿಗೆ 2157 ವಿದ್ಯಾರ್ಥಿಗಳು ಹಾಗೂ ೯ನೇ ತರಗತಿಗೆ 1043 ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆ ಬರೆದರು. ಬೆಳಗಾವಿ ಜಿಲ್ಲೆಯಿಂದ ಅತೀ ಹೆಚ್ಚು 3,513 ವಿದ್ಯಾರ್ಥಿಗಳು, ಬಾಗಲಕೋಟೆ ಹಾಗೂ ವಿಜಯಪುರದಿಂದ ಕ್ರಮವಾಗಿ 1,519 ಹಾಗೂ 1,008 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು.

ಪ್ರವೇಶ ಪರೀಕ್ಷೆಯು ವಿದ್ಯಾರ್ಥಿಗಳು ಪ್ರಸ್ತುತ ಓದುತ್ತಿರುವ ಪಠ್ಯವಿಷಯಗಳಿಗೆ ಸಂಬಂಧಿಸಿದ ಹಾಗೂ ಸಾಮಾನ್ಯ ಜ್ಞಾನ, ತಾರ್ಕಿಕ ಸಾಮಾರ್ಥ್ಯ ಆಧಾರಿತ ಬಹು ಆಯ್ಕೆಯ ಪ್ರಶ್ನೆಗಳನ್ನು ಒಳಗೊಂಡಿತ್ತು. ಪರೀಕ್ಷೆಯಲ್ಲಿ ನಕಲು ತಡೆಗಟ್ಟುವ ಉದ್ದೇಶದಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುವ ರೀತಿಯಲ್ಲೇ ಎ,ಬಿ,ಸಿ,ಡಿ ಸಿರೀಸ್ ಪ್ರಶ್ನೆ ಪತ್ರಿಕೆಗಳು ಹಾಗೂ ಉತ್ತರ ನಮೂದಿಸಲು ಒಎಂಆರ್ ಶೀಟ್ ಒದಗಿಸಲಾಗಿತ್ತು. 20,000ಕ್ಕೂ ಅಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಆಗಮಿಸಿದ್ದರೂ ಬಹಳ ಅಚ್ಚುಕಟ್ಟಿನ ವ್ಯವಸ್ಥೆಯೊಂದಿಗೆ ಪರೀಕ್ಷೆ ನಡೆಸಲಾಯಿತು. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ ಆಳ್ವಾಸ್ ಸಂಸ್ಥೆಯ ವತಿಯಿಂದ ಉಚಿತ ವಸತಿ ವ್ಯವಸ್ಥೆ ಕಲ್ಪಿಸಲಾಗಿತ್ತು.

Edited By : Nagesh Gaonkar
Kshetra Samachara

Kshetra Samachara

13/03/2022 08:53 pm

Cinque Terre

16.69 K

Cinque Terre

0

ಸಂಬಂಧಿತ ಸುದ್ದಿ