ಪುತ್ತೂರು : ತಿರುಚಿದ ಭಾರತದ ನಕ್ಷೆಯನ್ನು ವಿದ್ಯಾರ್ಥಿಗಳಿಗೆ ಪ್ರಶ್ನಪತ್ರಿಕೆಯಲ್ಲಿ ಹಂಚಿ ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಎಡವಟ್ಟು ಮಾಡಿಕೊಂಡ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.
ಮಾರ್ಚ್ 19 ರಂದು ಶನಿವಾರ ನಡೆದ ದ್ವಿತೀಯ ಪಿಯು ಪೂರ್ವಭಾವಿ ಪರೀಕ್ಷೆಯ ಇತಿಹಾಸ ಪ್ರಶ್ನೆಪತ್ರಿಕೆಯಲ್ಲಿ ಭಾರತದ ನಕ್ಷೆಯನ್ನು ಪಾಕ್ ಆಕ್ರಮಿತ ಕಾಶ್ಮೀರದ ಭಾಗವನ್ನು ಹೊರತುಪಡಿಸಿ ನೀಡಲಾಗಿದೆ.
ಪಾಕಿಸ್ತಾನ ಪ್ರಚುರಪಡಿಸುವ ಭಾರತದ ನಕ್ಷೆಯನ್ನು ದಕ್ಷಿಣಕನ್ನಡ ಜಿಲ್ಲಾ ಪಿಯು ಬೋರ್ಡ್ ವಿದ್ಯಾರ್ಥಿಗಳಿಗೆ ಹಂಚಿರುವುದು ಇದೀಗ ಭಾರೀ ಚರ್ಚೆಗೂ ಕಾರಣವಾಗಿದೆ.
Kshetra Samachara
23/03/2022 03:06 pm