ಕುಂದಾಪುರ: ಕುಂದಾಪುರದ ಹೆಸ್ಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗ್ರಾಮೀಣ ಮಕ್ಕಳ ಪಾಲಿಗೆ ಆಶಾಕಿರಣವಾಗಿದ್ದು, ಖಾಸಗಿ ಶಾಲೆಗಳಷ್ಟೇ ಉತ್ತಮ ಗುಣಮಟ್ಟದ ಶಿಕ್ಷಣ ಇಲ್ಲಿನ ಮಕ್ಕಳಿಗೆ ನೀಡುತ್ತಿದೆ.
ನಲಿ-ಕಲಿ ಶಿಕ್ಷಣ ಆಟವಾಡುತ್ತ ಪಾಠ ಕಲಿಯುವ ರೀತಿ ಸಾಂಸ್ಕೃತಿಕ ಚಟುವಟಿಕೆ ಮೌಲ್ಯಧಾರಿತ ಶಿಕ್ಷಣಕ್ಕೆ ಒತ್ತು ನೀಡುವ ಶಿಕ್ಷಕರ ವೃಂದ ಹಾಗೂ ಸ್ಮಾರ್ಟ್ ಕ್ಲಾಸ್ ಮೂಲಕ ಪಾಠ ಕಲಿಸುವ ವಿನೂತನ ಕಾರ್ಯಕ್ರಮಗಳನ್ನು ನಾವಿಲ್ಲಿ ನೋಡಬಹುದಾಗಿದೆ.
ಈ ಶಾಲೆಯೂ ರಾಜ್ಯ ಮಟ್ಟದಲ್ಲೂ ಹೆಸರುವಾಸಿಯಾಗಿದ್ದು, ಕಲಿಕಾ ಗುಣಮಟ್ಟದಲ್ಲಿ ‘ಎ’ ಶ್ರೇಣಿಯನ್ನು ಪಡೆದುಕೊಂಡು ರಾಜ್ಯದಲ್ಲೇ 4ನೇ ಸ್ಥಾನವನ್ನು ಪಡೆದುಕೊಂಡಿದೆ. ಪ್ರಸ್ತುತ ಈ ಶಾಲೆಯಲ್ಲಿ 200ಕ್ಕೂ ಅಧಿಕ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
Kshetra Samachara
09/04/2022 08:04 am