ವಕ್ವಾಡಿ: ಇಲ್ಲಿನ ಗುರುಕುಲ ವಿದ್ಯಾಸಂಸ್ಥೆಯಲ್ಲಿ ಚಿಲಿಪಿಲಿ ಬೇಸಿಗೆ ಶಿಬಿರ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಕಪೆಲ್ಲಾ ದ ಸೌಂಡ್ ಬೆಂಗಳೂರು ಸಂಸ್ಥಾಪಕ ಮೈಥಿಲಿ ಉದ್ಘಾಟಿಸಿದರು. ನಂತರ ಮಾತನಾಡಿ ಬೇಸಿಗೆ ಶಿಬಿರ ಮಕ್ಕಳಲ್ಲಿ ಅಡಗಿದ ಸೂಕ್ತ ಪ್ರತಿಭೆಯನ್ನು ಹೊರತರಲು ಸಹಾಯಕವಾಗಿದೆ. ಜೊತೆಗೆ ಮಕ್ಕಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ತೊಡಗಿಸಿಕೊಂಡು ಸ್ವತಂತ್ರ ಕಲಿಕೆಗೆ ಸಹಾಯವಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಾಂಡ್ಯ ಎಜುಕೇಷನ್ ಟ್ರಸ್ಟ್ ಜಂಟಿ ಕಾರ್ಯನಿರ್ವಾಹಕಿ ಅನುಪಮಾ ಎಸ್ ಶೆಟ್ಟಿ ಮಕ್ಕಳ ರಜಾ ದಿನಗಳಿಗೆ ಮಜಾ ನೀಡುವುದರ ಜೊತೆ ಹೊಸ ಕಲಿಕೆಗೆ ಅವಕಾಶ ನೀಡುವ ಉದ್ದೇಶದಿಂದ ಗುರುಕುಲ ಸಂಸ್ಥೆಯಲ್ಲಿ ಈ ಶಿಬಿರ ಆಯೋಜಿಸಲಾಗಿದ್ದು ವಿದ್ಯಾರ್ಥಿಗಳು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಈ ಸಂದರ್ಭ ಶಾಲಾ ಪ್ರಾಂಶುಪಾಲ ಮೋಹನ್. ಕೆ,ಕಾಲೇಜು ಪ್ರಾಂಶುಪಾಲ ಅರುಣ್ ಡಿಸಿಲ್ವಾ, ಶಿಬಿರದ ಇನ್ನೊರ್ವ ಮಾರ್ಗದರ್ಶಕಿ ಸಂಧ್ಯಾ, ಶಿಕ್ಷಕ ವೃಂದ, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Kshetra Samachara
12/04/2022 07:40 am