ಮಂಗಳೂರು: ಇಂದಿನಿಂದ ರಾಜ್ಯಾದ್ಯಂತ ಪಿಯುಸಿ ಪರೀಕ್ಷೆ ಆರಂಭವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 31,308 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, 51 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಹಿಜಾಬ್ ಗೊಂದಲಕ್ಕೆ ಎಡೆಮಾಡಿಕೊಡದೆ ಪರೀಕ್ಷೆ ಬರೆಯುವಂತೆ ಜಿಲ್ಲಾಡಳಿತ ವಿದ್ಯಾರ್ಥಿಗಳಿಗೆ ಮನವಿ ಮಾಡಿದೆ. ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ 200 ಮೀ. ಸುತ್ತಲ ಪ್ರದೇಶದಲ್ಲಿ ನಿಷೇದಾಜ್ಞೆ ಜಾರಿಯಾಗಿದೆ. ಮೇ.18ರವರೆಗೂ ನಿಷೇದಾಜ್ಞೆ ಮುಂದುವರಿಯಲಿದೆ.
ಮಂಗಳೂರಿನ ರಥಬೀದಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಲಾಯಿತು.ಅವರನ್ನು ಪ್ರವೇಶ ದ್ವಾರದ ಬಳಿಯೆ ತಡೆದ ಪೊಲೀಸರು ಹಿಜಾಬ್ ತೆಗದು ಬರುವಂತೆ ಸೂಚಿಸಿದ್ದಾರೆ.
ಅದರಂತೆ ಹಿಜಾಬ್ ಅನ್ನು ತೆಗೆದಿಟ್ಟು ಪರೀಕ್ಷಾ ಕೇಂದ್ರದ ವಿದ್ಯಾರ್ಥಿನಿಯರು ಪ್ರವೇಶಿಸಿದ್ದಾರೆ. ಜಿಲ್ಲೆಯಲ್ಲಿ ಎಲ್ಲೂ ಗೊಂದಲದ ವಾತಾವರಣ ಸೃಷ್ಟಿಯಾಗಿಲ್ಲ.
PublicNext
22/04/2022 10:33 am